ದೇಶಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಂದ ಉಚಿತ ಉಡುಗೊರೆ ಆಮಿಷ: ತ್ರಿಸದಸ್ಯ ಪೀಠಕ್ಕೆ ಉಲ್ಲೇಖಿಸಿದ ಸುಪ್ರೀಂ ಕೋರ್ಟ್
ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಉಚಿತ ಉಡುಗೊರೆಗಳನ್ನು ನೀಡಿ ಆಮಿಷವೊಡ್ಡದಂತೆ ತಡೆಯಬೇಕೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತ್ರಿಸದಸ್ಯ ಪೀಠಕ್ಕೆ ಉಲ್ಲೇಖಿಸಿದೆ.