ದೇಶಈಗ ಮತ್ತೊಂದು ಟ್ವೀಟ್ ಗಾಗಿ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಎಜಿ ಅಸ್ತು
ಸುಪ್ರೀಂ ಕೋರ್ಟ್ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ನವೆಂಬರ್ 18 ಮಾಡಿದ್ದ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಕಾಮಿಡಿಯನ್ ಕುನಾಲ್ ಕಾಮ್ರಾ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಅನುಮತಿ ನೀಡಿದ್ದಾರೆ.