ಕ್ರಿಕೆಟ್ಸೆಲ್ಫಿಗೆ ನಿರಾಕರಣೆ, ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ
ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.