ದೇಶಇಂಧನ ಬೆಲೆ ಏರಿಸುವ ಮೂಲಕ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ: ಸೋನಿಯಾ ಗಾಂಧಿ
ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ನಂತರ 22 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇಂಧನ ದರ ಏರಿಕೆ ಮೂಲಕ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.