ರಾಜ್ಯಸರ್ಕಾರ ಸುಭದ್ರ, 5 ವರ್ಷವೂ ನಾನೇ ಮುಖ್ಯಮಂತ್ರಿ: ಹೆಚ್ಚುವರಿ ಡಿಸಿಎಂ ನೇಮಕ ಹೈಕಮಾಂಡ್ ತೀರ್ಮಾನ; ಸಿದ್ದರಾಮಯ್ಯ
ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿರಲಿದ್ದೇನೆ, ಮಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.