Gadag

ನಿಖಿಲ್ ಬೈಕ್ ಡಿಕ್ಕಿ ಹೊಡೆದಿದ್ದು ನಟ ಯಶ್ ಬೆಂಗಾವಲು ವಾಹನಕ್ಕಲ್ಲ, ಬೇರೆ ಕರ್ತವ್ಯದಲ್ಲಿದ್ದ ಪೊಲೀಸ್ ಜೀಪಿಗೆ!
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಲುವಾಗಿ 20 ಅಡಿ ಎತ್ತರದಲ್ಲಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಮೂವರು ಯುವಕರು ದಾರುಣವಾಗಿ ಮೃತಪಟ್ಟು ಅವರ ಕುಟುಂಬದವರಿಗೆ ನಟ ಯಶ್ ಸಾಂತ್ವನ ಹೇಳಲು ಹೋಗಿದ್ದ ಸಮಯದಲ್ಲಿ ಮತ್ತೊಂದು ಘೋರ ದುರಂತ ನಡೆಯಿತು.

ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ: ಅಪಘಾತಕ್ಕೀಡಾಗಿದ್ದ ಅಭಿಮಾನಿ ಸಾವು!
ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.

ನಟ ಯಶ್ರನ್ನು ನೋಡುವ ಆತುರದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಅಭಿಮಾನಿ ಸ್ಥಿತಿ ಗಂಭೀರ!
ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲು ಕಟೌಟ್ ಕಟ್ಟುವಾಗ ಕರೆಂಟ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಕಟೌಟ್ ಗಳಿಗೆ ಸರ್ಕಾರ ನಿರ್ಬಂಧ ವಿಧಿಸಬೇಕು, ನಟರು ಸಹ ಎಚ್ಚರಿಕೆ ವಹಿಸಬೇಕು: ಆರ್ ಅಶೋಕ್
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಸಂದರ್ಭದಲ್ಲಿ ಕಟೌಟ್ ಕಟ್ಟಲು ಹೋಗಿದ್ದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಮೂವರು ಯುವಕರು ವಿದ್ಯುತ್ ತಂತಿ ತಲುಗಿ ಸಾವಿಗೀಡಾಗಿದ್ದು ಬಹಳ ನೋವಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ನಟ ಯಶ್ ಅಭಿಮಾನಿಗಳ ಸಾವು: ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಆಕ್ರಂದನ; ಆಸ್ಪತ್ರೆಗೆ ಶಾಸಕ ಭೇಟಿ, ಪರಿಹಾರದ ಭರವಸೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ಘನಘೋರ ದುರಂತವೊಂದು ನಡೆದು ಹೋಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಅವರ ಪಕ್ಕಾ ಅಭಿಮಾನಿಗಳಾದ ಗ್ರಾಮದ ಯುವಕರು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಮಧ್ಯರಾತ್ರಿಯಿಂದಲೇ ಭರ್ಜರಿ ಸಿದ್ದತೆ ನಡೆಸುತ್ತಿದ್ದರು.

ಹುಟ್ಟುಹಬ್ಬ ಅಂದರೆ ಅಸಹ್ಯಪಡುವಂತಾಗಿದೆ: ನಟ ಯಶ್
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಕರೆಂಟ್ ಶಾಕ್ ಹೊಡೆದು ಮೂವರು ಮೃತಪಟ್ಟಿದ್ದು ಈ ಹಿನ್ನೆಲೆಯಲ್ಲಿ ಗದಗ ಸೂರಣಗಿ ಗ್ರಾಮಕ್ಕೆ ತೆರಳಿದ ಯಶ್ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರು.

ಯಶ್ ಹುಟ್ಟುಹಬ್ಬ: ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳ ಸಾವು
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಲೋಹದ ಕಟೌಟ್ ಹಾಕುವಾಗ ವಿದ್ಯುತ್ ವೈರ್ ತಗುಲಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕಟೌಟ್ ನಿಲ್ಲಿಸಲು ಹೋಗಿ ಮೂವರು ಸಾವು: ಮೃತ ಅಭಿಮಾನಿಗಳ ಮನೆಗೆ ಇಂದು ಯಶ್ ಭೇಟಿ
ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ನಿಧನರಾಗಿರುವ ಮೂವರ ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು ಇಂದು ಸಂಜೆಯೇ ನಟ ಯಶ್ ಗದಗ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ನಟ ಯಶ್ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ, ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ
ರಾಕಿಂಗ್ ಸ್ಟಾರ್ ಯಶ್ (Rocking star Yash) ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

