Gali Janardhan Reddy

ಅಧಿಕಾರಕ್ಕೆ ಬಂದಿದ್ದೇ ಆದರೆ, ಕೆಆರ್‌ಪಿಪಿಯಿಂದ ಸಕಾರಾತ್ಮಕ ಬದಲಾವಣೆ: ಗಾಲಿ ಜನಾರ್ಧನ ರೆಡ್ಡಿ
ಹಿಂದಿನ ಹಾಗೂ ಈಗಿನ ಸರ್ಕಾರಗಳ ಒಂದೇ ರೀತಿಯ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದು, ಸಕಾರಾತ್ಮಕ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆಂದು ಎಂದು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಶುಕ್ರವಾರ ಹೇಳಿದರು.

ಜಾಮೀನು ಷರತ್ತಿನಲ್ಲಿ ಸಡಿಲಿಕೆ ಕೋರಿ ಗಾಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಷರತ್ತು ಸಡಿಲಿಸುವಂತೆ ಕೋರಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

ಜನಾರ್ದನ ರೆಡ್ಡಿಯ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ'ಕ್ಕೆ ಫುಟ್ಬಾಲ್ ಚಿಹ್ನೆ; ಪ್ರಣಾಳಿಕೆ ಬಿಡುಗಡೆ
ಮಾಜಿ ಸಚಿವ, ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಜನಾರ್ಧನ ರೆಡ್ಡಿ ಇಂದು ಸೋಮವಾರ ಬೆಂಗಳೂರಿನಲ್ಲಿ ಪಕ್ಷದ ಚಿಹ್ನೆ, ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

1,200 ಕೋಟಿ ಇದ್ದ ಆಸ್ತಿ ಈಗ 4,000 ಕೋಟಿ ಆಗಿದೆ, ಆಸ್ತಿ ಜಪ್ತಿಗೆ ಹೆದರಲ್ಲ: ಜನಾರ್ದನ ರೆಡ್ಡಿ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುವುದಕ್ಕೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.

ಜನಾರ್ಧನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಅನುಮತಿ ನೀಡದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.

ಸಂಕ್ರಾಂತಿ ಬಳಿಕ ತಮ್ಮ ಪಕ್ಷದ ಪ್ರಣಾಳಿಕೆ ಪ್ರಕಟಿಸಲು ಗಾಲಿ ಜನಾರ್ದನ ರೆಡ್ಡಿ ನಿರ್ಧಾರ
ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷದ ಪ್ರಣಾಳಿಕೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 16ರ ನಂತರ ಪ್ರಕಟಿಸುವುದಾಗಿ ಬುಧವಾರ ಘೋಷಿಸಿದ್ದಾರೆ.

ಡಿ.25ರಂದು ರಾಜಕೀಯ ಭವಿಷ್ಯ ಕುರಿತು ನಿರ್ಧಾರ ಪ್ರಕಟಿಸುವೆ: ಜನಾರ್ದನ ರೆಡ್ಡಿ
ಕಳೆದ ವಾರ ರಾಯಚೂರು ಜಿಲ್ಲೆಯ ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಿಕೊಂಡಾಗಿನಿಂದ ಮಾಜಿ ಸಚಿವ, ಬಳ್ಳಾರಿ ಗಣಿಧಣಿ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ.ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮನೆ ಮಾಡಿ ರಾಜಕೀಯದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಗಣಿಧಣಿ ಜನಾರ್ದನ ರೆಡ್ಡಿ ರಾಜಕೀಯ ಸೆಕೆಂಡ್ ಇನ್ನಿಂಗ್ಸ್ ಗಂಗಾವತಿಗೆ ಶಿಫ್ಟ್?: ರೆಡ್ಡಿ ಅನುಪಸ್ಥಿತಿಯಲ್ಲಿ ನೂತನ ಗೃಹ ಪ್ರವೇಶ
ಬಿಜೆಪಿ ಮಾಜಿ ಸಚಿವ ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಿಂದ ರಾಜಕೀಯದ ಮತ್ತೊಂದು ಎರಡನೇ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ.

ಹನುಮ ಮಾಲಾಧಾರಣೆ ಮಾಡಿದ ಮಾಜಿ ಸಚಿವ ಜನಾರ್ಧನ ರೆಡ್ಡಿ: ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸಲು ನಿರ್ಧಾರ?
ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರು ಹನುಮ ಮಲಾಧಾರಣೆ ಮಾಡಿ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ಬೆಳವಣಿಗೆಯು ರೆಡ್ಡಿ ತಮ್ಮ ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸುತ್ತಿದ್ದಾರೆಂಬ ವದಂತಿಗಳನ್ನು ಹುಟ್ಟುಹಾಕಿದೆ.

