ರಾಜ್ಯಅತ್ಯಾಚಾರ ಪ್ರಕರಣಗಳ ಉನ್ನತ ಮಟ್ಟದ ತನಿಖೆಗೆ ಎಸ್ಐಟಿ ರಚಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
ಹಾವೇರಿ ಸಹಿತ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.