ದೇಶಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್ಸ್ಟರ್ ದೀಪಕ್ ಟಿನು
ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.