Ganja

ಹಾಸನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಆಟಾಟೋಪ: ಪೊಲೀಸರ ದಿಢೀರ್ ದಾಳಿ ವೇಳೆ ಮಾದಕ ವಸ್ತು, ಮೊಬೈಲ್ ಫೋನ್ಗಳು ಪತ್ತೆ!
ಹಾಸನ ಜಿಲ್ಲಾ ಕಾರಾಗೃಹದ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳಿಂದ 18 ಮೊಬೈಲ್‌ಗಳು, ಐದು ಸ್ಮಾರ್ಟ್‌ಫೋನ್‌ಗಳು, ಗಾಂಜಾ ಪ್ಯಾಕೆಟ್‌ಗಳು, ಬೀಡಿ ಮತ್ತು ಸಿಗರೇಟ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ 3.16 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ.

23 ಕೆಜಿ ಗಾಂಜಾ ಸಾಗಿಸುತ್ತಿದ್ದ ಆಂಧ್ರದ ಮಾಜಿ ರಣಜಿ ಆಟಗಾರನ ಬಂಧನ
23 ಕೆಜಿ ಗಾಂಜಾ ಸಾಗಿಸುತ್ತಿದ್ದ ಶ್ರೀಕಾಕುಳಂ ಜಿಲ್ಲೆಯ ಮಾಜಿ ರಣಜಿ ಕ್ರಿಕೆಟಿಗನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

12 ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ: ಎಂಬಿಎ ಪದವೀಧರ ಸೇರಿ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ!
ಸಿಸಿಬಿಯ ಮಹಿಳಾ ಹಾಗೂ ನಾರ್ಕೊಟಿಕ್ಸ್ ಸ್ಕ್ವಾಡ್ ನ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಓರ್ವ ಎಂಬಿಎ ಪದವೀಧರನೂ ಬಂಧನಕ್ಕೊಳಗಾಗಿದ್ದಾನೆ.

ಚುನಾವಣಾ ಸಮಯದಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 347 ಕೆಜಿ ಗಾಂಜಾ ವಶಕ್ಕೆ, 27 ಮಂದಿ ಬಂಧನ
ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 347.3 ಕೆಜಿ ಗಾಂಜಾ ವಶಪಡಿಸಿಕೊಂಡು 27 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಆಸ್ತಿ ವಿವಾದ; ಮನನೊಂದು ಹೆಚ್ಚಿನ ಪ್ರಮಾಣದ ಗಾಂಜಾ ಸೇದಿ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿ ಇಟ್ಟ ವ್ಯಕ್ತಿ
ಕಂಧಮಾಲ್ ಜಿಲ್ಲೆಯ ವ್ಯಕ್ತಿಯೊಬ್ಬ ಕೌಟುಂಬಿಕ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮನನೊಂದು ಹೆಚ್ಚಿನ ಪ್ರಮಾಣದ ಗಾಂಜಾ ಸೇವಿಸಿ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ.

ಕಲಬುರಗಿ: ಟ್ರಾಲಿ ಬ್ಯಾಗ್'ಗಳಲ್ಲಿ 34 ಕೆಜಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ
ಟ್ರಾಲಿ ಬ್ಯಾಗ್‌ಗಳಲ್ಲಿ 34 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಲಬುರಗಿ ರೈಲು ನಿಲ್ದಾಣದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಕನಕಪುರ: ರುದ್ರಾಕ್ಷಿ ಹೂವುಗಳು, ತೊಗರಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ
52 ವರ್ಷದ ವ್ಯಕ್ತಿಯೊಬ್ಬರು ವೈಯಕ್ತಿಕ ಬಳಕೆಗಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದಕ್ಕಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸರು ಆತನ ಜಮೀನಿನ ಮೇಲೆ ದಾಳಿ ನಡೆಸಿ ನಾಲ್ಕು ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 132 ಕೆಜಿ ಗಾಂಜಾ ವಶ, ಇಬ್ಬರು ವಶಕ್ಕೆ
ಶುಕ್ರವಾರ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು, ಮಂಗಳೂರು ಮತ್ತು ಕೇರಳಕ್ಕೆ ಸಾಗಿಸುತ್ತಿದ್ದ ಬರೊಬ್ಬರಿ 132 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

