ದೇಶಗಾರ್ಗಿ ಲೈಂಗಿಕ ಕಿರುಕುಳ ಪ್ರಕರಣ: ಹೈಕೋರ್ಟ್ನಿಂದ ಕೇಂದ್ರ, ಸಿಬಿಐ, ದೆಹಲಿ ಪೊಲೀಸರಿಗೆ ನೋಟಿಸ್
ಗಾರ್ಗಿ ಕಾಲೇಜಿನ ಸಾಂಸ್ಕೃತಿಕ ಉತ್ಸವವೊಂದರಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಬಗ್ಗೆ ಕೇಂದ್ರೀಯ ತನಿಖಾ ದಳದ ತನಿಖೆಯನ್ನು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಸಿಬಿಐ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.