GBA

ಡಾ.ರಾಜ್‌ಕುಮಾರ್ ರಸ್ತೆ ವೈಟ್-ಟಾಪಿಂಗ್ ಕಾರ್ಯ ತ್ವರಿತಗೊಳಿಸಿ; ಅಧಿಕಾರಿಗಳಿಗೆ GBA ಸೂಚನೆ
ಕಾಮಗಾರಿ ನಡೆಯುತ್ತಿರುವ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ, ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು.

BMRDA ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ; ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ: DCM
ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ ಎಂದರು.

ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್ ಸೇರಿ ಬೆಂಗಳೂರಿನ ಹೊರ ವಲಯದ ಮತ್ತಷ್ಟು ಪ್ರದೇಶಗಳು GBA ವ್ಯಾಪ್ತಿಗೆ: DCM ಡಿ.ಕೆ ಶಿವಕುಮಾರ್
ಈಗಿರುವ ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ 25 ಲಕ್ಷ ಜನಸಂಖ್ಯೆ ಇದೆ. ಅವರನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕಾಗುತ್ತದೆ.

ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್
ಮಳೆಯಿಂದಾಗಿ ಮುಚ್ಚಿದ್ದ ಗುಂಡಿಗಳೂ ಕೂಡ ಬಾಯ್ತೆರೆಯುತ್ತಿವೆ. ಮತ್ತೆ ಮತ್ತೆ ಗುಂಡಿಗಳು ಕಾಣಿಸಿಕೊಳ್ಳುತ್ತಿವೆ. ಗುಂಡಿಗಳನ್ನು ಮುಚ್ಚಲು ಸಮೀಕ್ಷೆ ಕಾರ್ಯ ಮತ್ತು ಮಳೆ ಎರಡೂ ದೊಡ್ಡ ಸವಾಲನ್ನು ಎದುರು ಮಾಡುತ್ತಿದೆ.

GBA, UDD: ಬೆಂಗಳೂರಿನ ಐದು ಹೊಸ ಪಾಲಿಕೆ ಕಚೇರಿ, ಕೌನ್ಸಿಲ್ ಸಭಾಂಗಣ ನಿರ್ಮಾಣಕ್ಕೆ ಭೂಮಿ ಹುಡುಕಾಟ
GBA ಮುಖ್ಯ ಆಯುಕ್ತ ಮಹೇಶ್ವರ ರಾವ್, ಭೂಮಿ ಖರೀದಿಸಲು ಮತ್ತು ಕಟ್ಟಡಗಳನ್ನು ನಿರ್ಮಿಸಲು 100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕಟ್ಟಡಗಳು ಸಿದ್ಧವಾಗುವವರೆಗೆ, GBA ಮುಖ್ಯ ಕಚೇರಿಯಲ್ಲಿರುವ ಸಭಾಂಗಣವನ್ನು ಕೌನ್ಸಿಲ್ ಸಭೆಗಳಿಗೆ ಬಳಸಲಾಗುತ್ತದೆ ಎಂದು ಹೇಳಿದರು.

ಬಾಕಿ ಕಾಮಗಾರಿ ಕೆಲಸ, ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳ ನಡುವಿನ ಸಮನ್ವಯ ಅಗತ್ಯ: ಮಹೇಶ್ವರ್ ರಾವ್
ಯಾವುದಾದರು ಅಭಿವೃದ್ಧಿ ಕಾಮಗಾರಿಗಳು ಎರಡು ಅಥವಾ ಹೆಚ್ಚು ನಗರ ಪಾಲಿಕೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದರೆ, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾಲಮಿತಿಯೊಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳ್ಳುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾತಿಗಣತಿ ಸಮೀಕ್ಷೆಗೆ ಹಿರಿಯ ಅಧಿಕಾರಿಗಳಿಂದಲೇ ಅಸಹಕಾರ: ಆರೋಪ ನಿರಾಕರಿಸಿದ ಮುನೀಶ್ ಮೌದ್ಗಿಲ್!
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಮನೆಗೆ ಸಮೀಕ್ಷೆಗೆಂದು ತೆರಳಿದ್ದ ಸಿಬ್ಬಂದಿ ಗಣತಿ ಮಾಡದೆ ಹಿಂದಿರುಗಿದ್ದಾರೆ.

ಜಾತಿಗಣತಿ: ಜಿಬಿಎ ವ್ಯಾಪ್ತಿಯಲ್ಲಿ 10 ದಿನದಲ್ಲಿ 13.12 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ..!
ಐದು ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 1,19,303 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಆರಂಭದಲ್ಲಿ ದಿನಕ್ಕೆ 2 ಲಕ್ಷ ಮನೆಗಳ ಸಮೀಕ್ಷೆಯ ಗುರಿಯನ್ನು ನಿಗದಿಪಡಿಸಲಾಗಿತ್ತು. ನಂತರ ಅದನ್ನು 3 ಲಕ್ಷಕ್ಕೆ ಹೆಚ್ಚಿಲಾಯಿತು.

ಸಮೀಕ್ಷೆಗೆ ಸಿಬ್ಬಂದಿ ನಿಯೋಜನೆ: ತುರ್ತು ಪರಿಸ್ಥಿತಿ ನಿಭಾಯಿಸುವುದೇ ಗ್ರೆಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸವಾಲು!
ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮರಗಳು ಮತ್ತು ಕೊಂಬೆಗಳು ಬೀಳುವ ದೂರುಗಳು ನಿಯಂತ್ರಣ ಕೊಠಡಿ ಮತ್ತು ಹಿರಿಯ ಅಧಿಕಾರಿಗಳನ್ನು ತಲುಪುತ್ತಿವೆ. ಆದರೆ ಈ ತುರ್ತು ಪರಿಸ್ಥಿತಿಗಳಿಗೆ ನಿರ್ವಹಿಸಲು ಸಿಬ್ಬಂದಿ ನಿಯೋಜನೆ ಬಹು ದೊಡ್ಡ ಸವಾಲಾಗಿ ಪರಿಣಮಿಸಿದೆ.

