ರಾಜ್ಯಕೋವಿಡ್ ಸೋಂಕಿತರ ಜೀನೋಮ್ ಸೀಕ್ವೆನ್ಸಿಂಗ್ಗೆ ಕ್ರಮ: ಡಾ.ಕೆ.ಸುಧಾಕರ್
ಕೋವಿಡ್ನಲ್ಲಿ ಹೊಸ ರೂಪಾಂತರಿ ವೈರಸ್ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.