Gerosa School

ಶ್ರೀರಾಮನಿಗೆ ಅಪಮಾನ ಮಾಡಿಲ್ಲ; ಶಿಕ್ಷಕರ ವಜಾಕ್ಕೆ ಬಿಜೆಪಿ ಶಾಸಕರು ಒತ್ತಡ ಹಾಕಿದ್ದಾರೆ: ಜೆರೋಸಾ ಶಾಲೆಯ ಆಡಳಿತ ಮಂಡಳಿ!
ಜೆರೋಸಾ ಶಾಲೆಯ ಇಂಗ್ಲಿಷ್ ಶಿಕ್ಷಕಿ ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇಂಟ್ ಜೆರೋಸಾ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಅವರು, ಶಿಕ್ಷಕಿಯನ್ನು ಕೆಲಸದಿಂದ ತೆಗೆದು ಹಾಕುವಂತೆ ಶಾಸಕ ವೇದವ್ಯಾಸ್ ಕಾಮತ್ ಶಾಲಾ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜೆರೋಸಾ ಶಾಲೆ ಬಳಿ ಗಲಾಟೆ ಆರೋಪ: ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲು
ಮಂಗಳೂರಿನ ಜೆಪ್ಪುವಿನಲ್ಲಿರುವ ಸೇಂಟ್ ಜೆರೋಸಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಶಾಲೆಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

