Ghulam Nabi Azad

ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು: ಕುವೈತ್ ನಲ್ಲಿ ಆಸ್ಪತ್ರೆಗೆ ದಾಖಲು
ಕುವೈತ್‌ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಜಾದ್ ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.

ಲೋಕಸಭಾ ಚುನಾವಣೆ 2024: ಜಮ್ಮು-ಕಾಶ್ಮೀರದಲ್ಲಿ 89 ಅಭ್ಯರ್ಥಿಗಳಿಗೆ ಠೇವಣಿ ನಷ್ಟ!
ಭಾರತದ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಒಟ್ಟು 100 ಅಭ್ಯರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಉಧಂಪುರ, ಜಮ್ಮು, ಅನಂತನಾಗ್-ರಜೌರಿ, ಶ್ರೀನಗರ ಮತ್ತು ಬಾರಾಮುಲ್ಲಾದ ಐದು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಲು ಹಿಂಜರಿತವೇಕೆ? ಗುಲಾಂ ನಬಿ ಆಜಾದ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಕುಟುಂಬದ ರಾಜಕೀಯ ಪರಂಪರೆ ಅವಲಂಬಿಸಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಮುಖಂಡ ಗುಲಾಂ ನಬಿ ಆಜಾದ್ ಟೀಕಿಸಿದ್ದಾರೆ.

ಗುಲಾಂ ನಬಿ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿಪಿಎಪಿ
ಡಿಪಿಎಪಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.

ಬಿಜೆಪಿ ಗೆಲ್ಲಬೇಕೆಂದು ಕಾಂಗ್ರೆಸ್ ಕೂಡ ಬಯಸುತ್ತದೆ ಎಂಬುದು ನನ್ನ ಅನಿಸಿಕೆ: ಗುಲಾಂ ನಬಿ ಆಜಾದ್
ಪಕ್ಷವನ್ನು ಬಲಪಡಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ನನಗೆ ಅನಿಸುತ್ತದೆ .

ವಿಧಾನಸಭೆ ಚುನಾವಣೆ ಫಲಿತಾಂಶ: ಅಲ್ಪಸಂಖ್ಯಾತರು ಈಗ ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ: ಗುಲಾಂ ನಬಿ ಆಜಾದ್
ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್ ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಬಹುತೇಕ ಭಾರತೀಯ ಮುಸ್ಲಿಮರು ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದಾರೆ: ಗುಲಾಂ ನಬಿ ಆಜಾದ್
ಬಹುತೇಕ ಭಾರತೀಯ ಮುಸ್ಲಿಮರು ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದಾರೆ. ಇದಕ್ಕೆ ಉದಾಹರಣೆಯಂತೆ ಕಾಶ್ಮೀರಿ ಕಣಿವೆಯಲ್ಲಿ ಬಹುಪಾಲು ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

ಯುಸಿಸಿ ಜಾರಿಗೊಳಿಸುವುದು ಆರ್ಟಿಕಲ್ 370 ರದ್ದು ಮಾಡಿದಷ್ಟು ಸುಲಭವಲ್ಲ: ಗುಲಾಂ ನಬಿ ಆಜಾದ್
ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.

ಸ್ವಂತ ರಾಜ್ಯದಲ್ಲಿ ಬಿಟ್ಟು ಬೇರೆ ಸ್ಥಳಗಳಲ್ಲಿ ವಿಪಕ್ಷಗಳಿಗೆ ಅಸ್ತಿತ್ವವಿಲ್ಲ; ಚುನಾವಣೆಗೂ ಮುನ್ನ ಒಗ್ಗಟ್ಟಿನಿಂದ ಪ್ರಯೋಜನವಿಲ್ಲ!
2024 ರ ಲೋಕಸಭಾ ಚುನಾವಣೆಗೆ ಮುನ್ನ 'ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

