ರಾಜ್ಯ2 ಕೋಟಿ ಕೋವಿಡ್ ಲಸಿಕೆ ಪೂರೈಕೆಗೆ ಜಾಗತಿಕ ಟೆಂಡರ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.