ರಾಜಕೀಯವಿಜಯೇಂದ್ರ ವೈಭವೀಕರಣಕ್ಕೆ ನನ್ನ ಅಭ್ಯಂತರವಿಲ್ಲ; ಆದ್ರೆ ಒಬ್ಬರ ಪ್ರಯತ್ನದಿಂದ ಗೆಲುವು ಸಾಧ್ಯವಿಲ್ಲ: ಸಚಿವ ಈಶ್ವರಪ್ಪ
ಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.