ವಿಶೇಷಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ. ಮಳೆ, ಬೆಳೆ ಚೆನ್ನಾಗಿ ಆಗಿ ಸಂತೃಪ್ತಿ, ಸಂತೋಷ ಸಮಾಜದಲ್ಲಿ ನೆಲೆಸಲಿ ಎಂಬುದು ಇದರ ಸಾಂಕೇತಿಕ ಅರ್ಥವಾಗಿದೆ.