ರಾಜಕೀಯಜೆಡಿಎಸ್ ಶಾಸಕ ಗೌರಿಶಂಕರ್ ಗೆ ರಿಲೀಫ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹತೆ ತೀರ್ಪಿಗೆ ಮಧ್ಯಂತರ ತಡೆ!
ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ.