ರಾಜಕೀಯಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆಗೆ ಹೆಚ್ಚಿದ ಒತ್ತಡ: ನಾಳೆ ಗವರ್ನರ್ ಭಾಷಣ ವೇಳೆ ಕಾಂಗ್ರೆಸ್ ಪ್ರತಿಭಟನೆ ಎಚ್ಚರಿಕೆ
ಸಚಿವ ಆನಂದ್ ಸಿಂಗ್ ಅವರ ಖಾತೆಯನ್ನು ಬದಲಾಯಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ನಾಳೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.