ರಾಜ್ಯರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ
ದೀಪಾವಳಿ ಹಬ್ಬಕ್ಕೆ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. ಅವರ ತುಟ್ಟಿಭತ್ಯೆ(ಡಿಎ)ಯನ್ನು ಈಗಿರುವ ಶೇಕಡಾ 21.5ರಿಂದ ಶೇಕಡಾ 24.5ಕ್ಕೆ ಹೆಚ್ಚಿಸಲಾಗಿದೆ. ಇದು ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.