government Bungalow

ನಾನೂ ಅಂಬೇಡ್ಕರ್ ಅನುಯಾಯಿ; ಮಹಾದೇವಪ್ಪ ನನ್ನ ತಂದೆ ಸಮಾನ; ಮನೆಯ ಗೋಡೆ ಒಡೆಸಿದ್ದು ನಾನಲ್ಲ: ವರಸೆ ಬದಲಿಸಿದ ಬೈರತಿ ಸುರೇಶ್!
ತಪ್ಪು ಮಾಹಿತಿ ಹೇಗೆ ಹರಡಿತೋ ಗೊತ್ತಿಲ್ಲ. ಮನೆ ಹಂಚಿಕೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಖಾಲಿ ಇದ್ದ ಕಾರಣ ಆ ಮನೆಯನ್ನು ನನಗೆ ಹಂಚಿಕೆ ಮಾಡಲಾಗಿತ್ತು. ಇದರಲ್ಲಿ ವಿವಾದವೇನಿದೆ ಎಂಬುದು ನನಗೆ ಗೊತ್ತಿಲ್ಲ.

2 ದಶಕಗಳ ನಂತರ ಸರ್ಕಾರಿ ಬಂಗಲೆ ತ್ಯಜಿಸಿದ ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ!
ಸುಮಾರು ಎರಡು ದಶಕಗಳ ಕಾಲ ತಮ್ಮ ನಿವಾಸವಾಗಿದ್ದ ಸರ್ಕಾರಿ ಬಂಗಲೆಯನ್ನು ಮತ್ತು ಅವರ ಪತಿ ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳದ ಕ್ಯಾಂಪ್ ಆಫೀಸ್ ನ್ನು ತ್ಯಜಿಸಿದ್ದಾರೆ.

ನವದೆಹಲಿ: ಸರ್ಕಾರಿ ಬಂಗಲೆ ಖಾಲಿ ಮಾಡಿದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ!
ಕಳೆದ ವರ್ಷ ಡಿಸೆಂಬರ್ ನಲ್ಲಿ ಸಂಸತ್ತಿನಿಂದ ಉಚ್ಛಾಟನೆಗೊಂಡಿದ್ದ ಟಿಎಂಸಿಯ ಮಾಜಿ ಸಂಸದೆ ಮಹುವಾ ಮೊಯಿತ್ರಾ ಶುಕ್ರವಾರ ನವದೆಹಲಿಯ 9 ಬಿ, ಟೆಲಿಗ್ರಾಫ್ ಲೇನ್‌ನಲ್ಲಿರುವ ಮನೆಯನ್ನು ಖಾಲಿ ಮಾಡಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಗೆ ಬಿಗ್ ರಿಲೀಫ್; ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ
ತಮಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದನ್ನು ತಡೆಯುವ ಮಧ್ಯಂತರ ತಡೆ ಆದೇಶವನ್ನು ಹಿಂಪಡೆದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.

ಲೋಕಸಭಾ ಸದಸ್ಯತ್ವ ಅನರ್ಹತೆ; ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ: ವರದಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ದಶಕಗಳಿಂದ ಸರ್ಕಾರಿ ಬಂಗಲೆಗಳಲ್ಲಿ ಅಕ್ರಮವಾಗಿ ನೆಲೆಸಿರುವ ಜನಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು!
ಸರ್ಕಾರಿ ಸೌಲಭ್ಯಗಳನ್ನು ಜನಪ್ರತಿನಿಧಿಗಳು ದುರುಪಯೋಗಪಡಿಸಿಕೊಳ್ಳುವ ಆರೋಪ ಹಿಂದಿನಿಂದಲೂ ಇದೆ. ಅದಕ್ಕೆ ಉದಾಹರಣೆಯೆಂಬಂತೆ ಇಬ್ಬರು ಸಂಸದರು, 9 ಮಾಜಿ ಸಂಸದರು, 576 ಮಂದಿ ಇತರ ನಿವೃತ್ತ ಅಧಿಕಾರಿಗಳು ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ ನೀಡುವ ಅಧಿಕೃತ ನಿವಾಸಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ.

50 ಸಾವಿರ ರು. ದಂಡ ಕಟ್ಟಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ತೇಜಶ್ವಿ ಯಾದವ್ ಗೆ ಸುಪ್ರೀಂ ಆದೇಶ
50 ಸಾವಿರ ರುಪಾಯಿ ದಂಡ ಕಟ್ಟಿ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷ ನಾಯಕ....

ಪಂಜಾಬ್ ಸರ್ಕಾರದ ಆಫರ್ ಗೆ ಬೇಡ ಎಂದ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್!
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲುಕಂಡ ವಿಪಕ್ಷ ಸ್ಥಾನದ ಅರ್ಹತೆ ಕೂಡ ಕಳೆದುಕೊಂಡಿರುವ ಅಕಾಲಿ ದಳ ಮುಖ್ಯಸ್ಥ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರು ಸಿಎಂ ಅಮರೀಂದರ್ ಸಿಂಗ್ ಅವರ ಸರ್ಕಾರಿ ಬಂಗಲೆ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದಾರೆ.

