ದೇಶಜ್ಯೋತಿಷಿ ಬಳಿ ಹೋಗಿ ಅಂಗೈ ತೋರಿಸಿ ಸರ್ಕಾರದ ಭವಿಷ್ಯ ಕೇಳಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ವಿರೋಧ ಪಕ್ಷಗಳ ಟೀಕೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ಅದಕ್ಕೆ ಸಂಬಂಧಪಟ್ಟಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದರ ಮಧ್ಯೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಾಸಿಕ್ ಜಿಲ್ಲೆಯ ಸಿನ್ನಾರ್ನಲ್ಲಿ ಸ್ಥಳೀಯ ಜ್ಯೋತಿಷಿಯೊಬ್ಬರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಮತ್ತು ವಿವಾದಕ್ಕೆ ಕಾರಣವಾಗಿದೆ.