Government hospital

HD ಕೋಟೆ: ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್, ನೀರಿನ ಕೊರತೆ; ಅಪಾಯದಲ್ಲಿ ಡಯಾಲಿಸಿಸ್ ರೋಗಿಗಳು
ಬುಡಕಟ್ಟು ಜನಸಂಖ್ಯೆಗೆ ಸೇವೆ ಸಲ್ಲಿಸುತ್ತಿರುವ ಎಚ್‌ಡಿ ಕೋಟೆ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಮತ್ತು ನೀರಿನ ಕೊರತೆಯಿಂದಾಗಿ ರೋಗಿಗಳು ತೀವ್ರ ಪರದಾಡುವಂತಾಗಿದೆ.

ತಮಿಳುನಾಡಿನಂತೆ ಕರ್ನಾಟಕದಲ್ಲಿ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನೀಡಬೇಕು: ದಿನೇಶ್ ಗುಂಡೂರಾವ್ (ಸಂದರ್ಶನ)
ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಕೈಗೊಂಡ ಉಪಕ್ರಮಗಳಿಂದ ಹಿಡಿದು ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಾರಿಕೆ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕರು ಮತ್ತು ಸಿಬ್ಬಂದಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ್ದಾರೆ.

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 24 ರೋಗಿಗಳು ಸಾವನ್ನಪ್ಪಿದ್ದು ಮೃತರಲ್ಲಿ 12 ನವಜಾತ ಶಿಶುಗಳೂ ಸೇರಿವೆ.

ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ: ರಾಜ್ಯ ಬಜೆಟ್ ನಲ್ಲಿ 146 ಕೋಟಿ ರೂ. ಮೀಸಲು
ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಬಜೆಟ್'ನಲ್ಲಿ ರೂ.146 ಕೋಟಿ ಮೀಸಲಿಡಲಾಗಿದ್ದು, ಸರ್ಕಾರದ ಈ ಯೋಜನೆಗೆ ಆರೋಗ್ಯ ತಜ್ಞರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಹಾವೇರಿ: 185 ಕೆಜಿ ತೂಕದ ಮಹಿಳೆಗೆ ಶಸ್ತ್ರ ಚಿಕಿತ್ಸೆ ನಡೆಸಿ ಪ್ರಾಣ ಉಳಿಸಿದ ಸರ್ಕಾರಿ ಆಸ್ಪತ್ರೆ ವೈದ್ಯರು!
ಹಾವೇರಿ ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡವೊಂದು 185 ಕೆಜಿ ತೂಕದ 48 ವರ್ಷದ ಮಹಿಳೆಯೊಬ್ಬರಿಗೆ ಅಪರೂಪದ ಕರುಳಿನ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಅವರ ಜೀವವನ್ನು ಉಳಿಸಿದ್ದಾರೆ. ಈ ಶಸ್ತ್ರ ಚಿಕಿತ್ಸೆ ಕಷ್ಟ ಎಂದು ಹೇಳಿ ಅನೇಕ ಚಿಕಿತ್ಸೆ ನೀಡಲು ಅನೇಕ ಖಾಸಗಿ ಆಸ್ಪತ್ರೆಗಳು ಕೈ ಚೆಲ್ಲಿದ ನಂತರ ಸರ್ಕಾರಿ ವೈದ್ಯರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.

ರಾಮನಗರ: ಬಾಣಂತಿ ಡಿಸ್ಚಾರ್ಜ್ ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯರಾದ ಶಶಿಕಲಾ, ಐಶ್ವರ್ಯ ಅಮಾನತು
ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.

ಗದಗ: ಮೃತ ಗರ್ಭಿಣಿ ಗರ್ಭದಿಂದ ಜೀವಂತ ಮಗು ಹೊರತೆಗೆದ ಸರ್ಕಾರಿ ವೈದ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
ಗದಗಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ(ದಂಡಪ್ಪ ಮಾನ್ವಿ ಸರ್ಕಾರಿ ಆಸ್ಪತ್ರೆ)ಯ ವೈದ್ಯರು ಮೃತಪಟ್ಟಿದ್ದ ಗರ್ಭಿಣಿಗೆ ವಿಶೇಷ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಜೀವಂತವಾಗಿ ಮಗುವನ್ನು ಹೊರತೆಗೆದಿದ್ದು,...

