governor

ಕೃಷಿ ಸಚಿವ ಚಲುವರಾಯಸ್ವಾಮಿಯಿಂದ ಹಣಕ್ಕೆ ಬೇಡಿಕೆ ಆರೋಪ: ತನಿಖೆಗೆ ರಾಜ್ಯಪಾಲರ ಸೂಚನೆ
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ದೂರು
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಉಡುಪಿ ವಿದ್ಯಾರ್ಥಿನಿ ವಿಡಿಯೊ ಪ್ರಕರಣ ಎಸ್ ಐಟಿಗೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣವನ್ನು ಸಹಪಾಠಿಗಳು ಮಾಡಿರುವ ಪ್ರಕರವನ್ನು ಗಂಭೀರವಾಗಿ ತೆಗೆದುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಬಿಜೆಪಿ ತೀವ್ರ ಪ್ರಯತ್ನ ಮಾಡುತ್ತಿದೆ.

ಏರ್ ಏಷ್ಯಾ ವಿರುದ್ಧ ದಾಖಲಿಸಿದ್ದ ದೂರು ವಾಪಸ್ ಪಡೆದ ರಾಜ್ಯಪಾಲರ ಕಚೇರಿ!
ತಡವಾಗಿ ಬಂದರು ಎಂಬ ಕಾರಣಕ್ಕಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ತೆರಳಿದ್ದ ಏರ್ ಏಷ್ಯಾ ವಿಮಾನ ಸಂಸ್ಥೆಯ ಹಾಗೂ ಅದರ ಇಬ್ಬರು ಸಿಬ್ಬಂದಿಗಳ ವಿರುದ್ಧ ದಾಖಲಿಸಿದ್ದ ದೂರನ್ನು ರಾಜ್ಯಪಾಲರ ಕಚೇರಿ ಹಿಂಪಡೆದುಕೊಂಡಿದೆ.

'ರಾಜ್ಯಪಾಲರನ್ನು ಈ ರೀತಿ ನಡೆಸಿಕೊಂಡಿದ್ದನ್ನು ಎಂದಿಗೂ ನೋಡಿಲ್ಲ': ಏರ್ ಏಷ್ಯಾ ವಿರುದ್ಧ ಅಧಿಕಾರಿಗಳ ಅಸಮಾಧಾನ
ಗುರುವಾರ ಮಧ್ಯಾಹ್ನ ಕೆಐಎಯಲ್ಲಿ ಖಾಸಗಿ ವಿಮಾನದ ಸಿಬ್ಬಂದಿಗಳು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ಗೆ ಅವರೊಂದಿಗೆ ನಡೆದುಕೊಂಡ ರೀತಿಯ ಬಗ್ಗೆ ರಾಜಭವನದ ಉನ್ನತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳು ನಾಡು ಬಿಜೆಪಿ ಅಧ್ಯಕ್ಷ: ಡಿಎಂಕೆ ವಿರುದ್ಧ ಹಗರಣದ ಆರೋಪ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಿದ್ದು, ಡಿಎಂಕೆ ವಿರುದ್ಧ ಹಗರಣದ ಆರೋಪ ಮಾಡಿದ್ದಾರೆ.

'INDIA' ಸಮಾವೇಶದಲ್ಲಿ ಸರ್ಕಾರಿ ಅಧಿಕಾರಿಗಳ ಭಾಗವಹಿಸುವಿಕೆ: ಸರ್ಕಾರದ ವಿವರಣೆ ಕೇಳಲು ಬಿಜೆಪಿ-ಜೆಡಿಎಸ್ ರಾಜ್ಯಪಾಲರಿಗೆ ಒತ್ತಾಯ
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಾಜಕೀಯ ನಾಯಕರನ್ನು ಸ್ವಾಗತ ಮಾಡಲು ಕೆಲವು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳುವಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ಗುರುವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನು ಬಹಿ

10 ಮಂದಿ ಬಿಜೆಪಿ ಶಾಸಕರ ಅಮಾನತು: ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ, ರಾಜ್ಯಪಾಲರಿಗೆ ದೂರು
ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು ಧರಣಿ ನಡೆಸಿದರು. ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಪ್ಪ ಚರ್ಮದ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

