Govind Karjol

ಡಿಸಿಎಂ ಕಾರಜೋಳರ ಖಾತೆಯ ಮೇಲೆ ನೂತನ ಸಚಿವರ ಕಣ್ಣು
ಕಳೆದ ಡಿಸೆಂಬರ್‌ನಲ್ಲಿ ನಡೆದ ೧೫ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದ ಬಳಿಕ ಡೋಲಾಯಮಾನವಾಗಿದ್ದ ಉಪಮುಖ್ಯಮಂತ್ರಿ ಸ್ಥಾನ ಈಗ ಭದ್ರವಾಗಿದ್ದು, ಸಚಿವ ಗೋವಿಂದ ಕಾರಜೋಳರ ಬಳಿಯ ಖಾತೆಗಳ ಮೇಲೆ ಇದೀಗ ಬಹುತೇಕ ಸಚಿವರ ಕಣ್ಣು ಬಿದ್ದಿದೆ.

ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಆರಾಧಿಸಿ: ಗೋವಿಂದ ಕಾರಜೋಳ
ಕನ್ನಡ ಭಾಷೆಯ ಆರಾಧನೆ ಸಾಹಿತ್ಯ ಸಮ್ಮೇಳನದ ಧ್ಯೇಯ. ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

ಸಚಿವ ಸ್ಥಾನ ತ್ಯಾಗ... ಪಕ್ಷದ ನಿರ್ಧಾರಕ್ಕೆ ಬದ್ದ: ಡಿಸಿಎಂ ಗೋವಿಂದ ಕಾರಜೋಳ
ಹಿರಿಯರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎನ್ನುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ರ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರು ಪಕ್ಷದ ನಿರ್ಧಾರಕ್ಕೆ ತಾವು ಬದ್ಧ ಎಂದು ತಿಳಿಸಿದ್ದಾರೆ.

ಬಾಗಲಕೋಟೆ: ಉಚಿತ ಲ್ಯಾಪ್‌ಟಾಪ್‌ಗಾಗಿ ಡಿಸಿಎಂಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು
ಜಿಲ್ಲಾಡಳಿತ ಭವನದಲ್ಲಿನ ನ್ಯೂ ಅಡಿಟೋರಿಯಂನಲ್ಲಿ ಭಾನುವಾರ ನಡೆದ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸಪ್ತಾಹ ಕಾರ್ಯಕ್ರಮದಲ್ಲಿ ವೇಳೆ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ಗಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಡಿಸಿಎಂ ಕಾರಜೋಳ
ಬೇಸಿಗೆ ಸಮೀಪಿಸುತ್ತಿದ್ದು, ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ಚಿಂತೆ, ಬಿಜೆಪಿಗೆ ಅಭಿವೃದ್ಧಿ ಚಿಂತೆ: ಕಾರಜೋಳ
ಸ್ವಾತಂತ್ರ್ಯ ನಂತರ ಕಳೆದ ೭೦ ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಬರೀ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತ ಬಂದಿದ್ದು, ಈಗಲೂ ಅದನ್ನೇ ಮುಂದುವರಿಸಲು ವಿನಾಕಾರಣ ಮುಸ್ಲೀಂರಲ್ಲಿ ಪೌರತ್ವ ಕಾನೂನಿನ ಬಗ್ಗೆ ತಪ್ಪು ಕಲ್ಪನೆ ಮೂಡಿಸಲು ದೇಶದಾದ್ಯಂತ ಬೊಬ್ಬೆ ಹಾಕುವ ಕೆಲಸ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಡಿಸಿಎಂ ಸ್ಥಾನಕ್ಕಾಗಿ ಹೆಚ್ಚಿದ ಪೈಪೋಟಿ: ಕಾರಜೋಳಗೆ ಸ್ಥಾನ ಅಭಾದಿತ?
ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಪಾಳೆಯದಲ್ಲಿ ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪೈಪೋಟಿಯೂ ಜೋರಾಗಿದೆ.

ಹಣ ಹಂಚಿಕೆ ಸಾಬೀತಾದರೇ ರಾಜಕೀಯ ನಿವೃತ್ತಿ: ಗೋವಿಂದ ಕಾರಜೋಳ
ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದಾರೆ, ನಾನು ಆರು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದಿಗೂ ಇಂತಹ ಕೆಲಸಮಾಡಿಲ್ಲ ಎಂದು ಹೇಳಿದ್ದಾರೆ.

ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ
ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

