ರಾಜ್ಯತಳವಾರ, ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಗೆಜೆಟ್ ಅಧಿಸೂಚನೆಗೆ ಕಾರಜೋಳ ಆದೇಶ
ತಳವಾರ, ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ ರಾಜ್ಯದಲ್ಲೂ ಗೆಜೆಟ್ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.