ರಾಜ್ಯಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: 'ಸಂಭ್ರಮ ಶನಿವಾರ' ಆಚರಣೆ ಕುರಿತು ಸರ್ಕಾರ ಸುತ್ತೋಲೆ!
ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.