ರಾಜ್ಯಗ್ರಾಮ ಪಂಚಾಯಿತಿ ಚುನಾವಣೆವರೆಗೂ ಆಡಳಿತಾಧಿಕಾರಿ ನೇಮಕ: ಸಚಿವ ಮಾಧುಸ್ವಾಮಿ
ಗ್ರಾಮ ಪಂಚಾಯತ್ ಗಳಿಗೆ ಶೀಘ್ರ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಅಲ್ಲಿಯವರೆಗೆ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಗುರುವಾರ ಹೇಳಿದ್ದಾರೆ.