ರಾಜ್ಯಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: ಸಚಿವ ಸುರೇಶ್ ಕುಮಾರ್
ಡಿಜಿಟಲ್ ಶಿಕ್ಷಣ ಇಲ್ಲವೇ ಆನ್ ಲೈನ್ ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.