Grama Panchayat

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ: ಪ್ರಿಯಾಂಕ್ ಖರ್ಗೆ!
ಬೇಸಿಗೆಯಲ್ಲಿ ನೀರು ಒದಗಿಸಲು ಪ್ರತಿ ಜಿಲ್ಲೆಗೆ 5 ಕೋಟಿ ರೂ. ಅನುದಾನ ನೀಡಲಾಗಿದೆ. ಇಷ್ಟು ಹಣವನ್ನು ಖರ್ಚು ಮಾಡಿದ ನಂತರ ಅಗತ್ಯವಿದ್ದರೆ ಹೆಚ್ಚಿನ ಹಣವನ್ನು ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಕರ್ನಾಟಕದೊಂದಿಗೆ ವಿಲೀನಗೊಳಿಸುವ ಗ್ರಾ.ಪಂಗಳ ನಿರ್ಣಯ: ಮಹಾರಾಷ್ಟ್ರ ಎಚ್ಚರಿಕೆ ನಡುವೆಯೂ ನಿರ್ಧಾರಕ್ಕೆ ಬದ್ಧ ಎಂದ ಗ್ರಾಮಸ್ಥರು
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಹಲವಾರು ಗ್ರಾಮ ಪಂಚಾಯಿತಿಗಳು ಇತ್ತೀಚೆಗೆ ತಮ್ಮ ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ನಿರ್ಣಯಗಳನ್ನು ಅಂಗೀಕರಿಸಿವೆ. ಈ ನಿರ್ಣಯಗಳನ್ನು ಹಿಂತೆಗೆದುಕೊಳ್ಳುವಂತೆ ಮಹಾರಾಷ್ಟ್ರದ ಸ್ಥಳೀಯ ಆಡಳಿತದ ಉನ್ನತ ಅಧಿಕಾರಿಗಳ ಎಚ್ಚರಿಕೆಯ ಹೊರತಾಗಿಯೂ ತಮ್ಮ ನಿಲುವಿಗೆ ಬದ್ಧರಾಗಿರಲು ನಿರ್ಧರಿಸಿವೆ.

ಗ್ರಾಪಂ ಮಟ್ಟದ ಕಾರ್ಯಪಡೆ, ಗ್ರಾಮಮಟ್ಟದ ಕಾರ್ಯಪಡೆ ರಚಿಸಿ ಸರ್ಕಾರ ಆದೇಶ
ಗ್ರಾಮಾಂತರ ಭಾಗದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡದಂತೆ ತಡೆಯಲು ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ಹಾಗೂ ಗ್ರಾಮಮಟ್ಟದ ಕಾರ್ಯಪಡೆಯನ್ನು ರಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಅಕ್ಟೋಬರ್‌ನಲ್ಲಿ ಗ್ರಾ.ಪಂ.ಚುನಾವಣೆ ಸಾಧ್ಯತೆ: ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸೂಚನೆ
ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯದಲ್ಲಿ ಸದ್ಯ ಅಸ್ತಿತ್ವದಲ್ಲಿರುವ 5,800 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

ಗ್ರಾ.ಪಂಗೆ ನಾಮನಿರ್ದೇಶನ ಸದಸ್ಯರ ನೇಮಕ: ಸರ್ಕಾರದ ವಿರುದ್ಧ ಕಾನೂನು ಹೋರಾಟ- ಸಿದ್ದರಾಮಯ್ಯ
ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಸರ್ಕಾರ ಗ್ರಾಮಪಂಚಾಯಿತಿ ಚುನಾವಣೆಯನ್ನು ಮುಂದೂಡಿ ನಾಮನಿರ್ದೇಶನ ಸದಸ್ಯರ ನೇಮಕಕ್ಕೆ ಮುಂದಾಗಿರುವುದರ ವಿರುದ್ಧ ಕಾಂಗ್ರೆಸ್ ಗ್ರಾಮಪಂಚಾಯಿತಿ ಮಟ್ಟದಲ್ಲಿ ಹೋರಾಟ ನಡೆಸಲು ಸಜ್ಜಾಗಿದೆ

ಪಂಚಾಯಿತಿಗಳಿಗೆ ಆಡಳಿತ ಸಮಿತಿ, ಸಂವಿಧಾನ ಆಶಯಕ್ಕೆ ಕೊಡಲಿಪೆಟ್ಟು: ಮಲ್ಲಿಕಾರ್ಜುನ ಖರ್ಗೆ
ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿರುವ ಪಂಚಾಯತ್‌ಗಳಿಗೆ ಆಡಳಿತ ಸಮಿತಿಗಳನ್ನು ನೇಮಿಸುವ ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ, ಪಂಚಾಯತ್ ಸಂಸ್ಥೆಗಳ ಆಶಯಕ್ಕೆ ಮರಣ ಗಂಟೆ, ಕೊಡಲಿಪೆಟ್ಟು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಬಲವಾಗಿ ಖಂಡಿದ್ದಾರೆ.

ಗ್ರಾ.ಪಂ.ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು: ಸಿದ್ದರಾಮಯ್ಯ
ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತ್‌ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ, ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರಿಂದ ಶಾಲೆಗಳ ಮೇಲ್ವಿಚಾರಣೆ: ಆರ್ ಡಿಪಿಆರ್ ಮಾರ್ಗಸೂಚಿಗಳು
ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರಾಮ ಪಂಚಾಯಿತಿ ಸದಸ್ಯರು ಹಳ್ಳಿಗಳಲ್ಲಿ ಇಡೀ ವರ್ಷ ಮಕ್ಕಳ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.

ಶೀಘ್ರದಲ್ಲೇ ಗ್ರಾಮ ಪಂಚಾಯಿತಿಗಳ ಶ್ರೇಣಿಕರಣ :ಉನ್ನತ ಅಂಕ ಪಡೆದ ಪಂಚಾಯತ್ ಗಳಿಗೆ ಹೆಚ್ಚಿನ ಅನುದಾನ
ಶೀಘ್ರದಲ್ಲೇ ಗ್ರಾಮ ಪಂಚಾಯಿತಿಗಳನ್ನು ಶ್ರೇಣಿಕರಿಸಲಾಗುವುದು, ಉನ್ನತ ಅಂಕ ಪಡೆದ ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

