Greater Bangalore Authority

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭ: ಡಿ.ಕೆ ಶಿವಕುಮಾರ್-ರಹೀಮ್ ಖಾನ್ ಖಾತೆಗಳಲ್ಲಿ ಬದಲಾವಣೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.

5 ಪಾಲಿಕೆ ಚುನಾವಣೆ ಮುಗಿಯುವವರೆಗೆ ನಗರದಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಅಡಿಯಲ್ಲಿ ಹೊಸದಾಗಿ ರಚಿಸಲಾದ ಐದು ಮಹಾನಗರ ಪಾಲಿಕೆಗಳ ಡಿಲಿಮಿಟೇಶನ್ ಪ್ರಕ್ರಿಯೆಯನ್ನು 2025ರ ನ.1ರೊಳಗೆ ಪೂರ್ಣಗೊಳಿಸಲು ಮತ್ತು ನ.30ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅರಣ್ಯ ಅಪರಾಧ ಪ್ರಕರಣ: ಪೊಲೀಸರ FIR ಕಿರುಕುಳದಿಂದ ಬೇಸತ್ತು ಹುದ್ದೆ ತೊರೆಯಲು GBA ಸಿಬ್ಬಂದಿ ಮುಂದು, PCCಗೆ ಈಶ್ವರ್ ಖಂಡ್ರೆ ಪತ್ರ
ಮರ ಬಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದು, ಇದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅರಣ್ಯ ಇಲಾಖೆ ಅಧಿಕಾರಿಗಳು ಬೇಸತ್ತಿದ್ದಾರೆಂದು ಹೇಳಿದ್ದಾರೆ.

ನಗರದಲ್ಲಿ 9,567 ಕೆಜಿ ಏಕ-ಬಳಕೆಯ ಪ್ಲಾಸ್ಟಿಕ್ ವಶಕ್ಕೆ: 7,38,700 ರೂ ದಂಡ ವಸೂಲಿ
ಕೆ.ಆರ್. ಮಾರುಕಟ್ಟೆ ವ್ಯಾಪ್ತಿಯಲ್ಲಿ ಮೂರು ಪ್ರಕರಣದಿಂದ 29 ಕೆಜೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, 30 ಸಾವಿರ ರೂ. ದಂಡ ಸ್ವೀಕರಿಸಲಾಗಿದೆ. ಕೆ.ಆರ್. ಮಾರುಕಟ್ಟೆ ಒಂದು ಗೋದಾಮನ್ನು ಸೀಜ್ ಮಾಡಲಾಗಿದೆ.

ವಿಪಕ್ಷ ನಾಯಕರ ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಡಿ.ಕೆ ಶಿವಕುಮಾರ್
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು.

Watch | ಕನ್ನಡಿಗರಿಗೆ ಅವಮಾನ ಕೇಸ್: ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ; ಇಂದಿನಿಂದ ಗ್ರೇಟರ್ ಬೆಂಗಳೂರು ಕಾಯ್ದೆ ಜಾರಿ; ಆಪರೇಷನ್ ಸಿಂಧೂರ್ ಬೆಂಬಲಿಸಿ ಬಿಜೆಪಿ ತಿರಂಗಾ ಯಾತ್ರೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅನುಷ್ಠಾನಕ್ಕೆ ವಿರೋಧ: ಇದು ಕನ್ನಡಿಗರ ವಿರೋಧಿ ಎಂದ BJP-JDS
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗಬಾರದು, ಹೀಗೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರು. ನಗರದ ಕನ್ನಡಿಗರಿಗಾಗಿ ಉಳಿಯಬೇಕು. ಇಲ್ಲಿ ಒಬ್ಬ ಕನ್ನಡಿಗ ಮೇಯರ್ ಆಗಬೇಕು. ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತದೆ.

