ರಾಜ್ಯ'ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಣೆ; ನಿಮ್ಮ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ
'ಗೃಹ ಆರೋಗ್ಯ ಯೋಜನೆ' ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ 14 ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ(ಎನ್ಸಿಡಿ) ತಪಾಸಣೆ ಮತ್ತು ನಿರ್ವಹಣೆ ಮಾಡುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ.