Gruha Jyoti Scheme

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!
ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷಣಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದಾರೆ.

ಸರ್ವರ್ ಸಮಸ್ಯೆ; ಗೃಹಜ್ಯೋತಿ ಯೋಜನೆಯಡಿ ನೋಂದಣಿಗೆ ಯಾವುದೇ ಗಡುವು ಇಲ್ಲ!
ಸರ್ವರ್ ಸಮಸ್ಯೆಗಳಿಂದಾಗಿ ಮತ್ತು ಬೇಡಿಕೆಯನ್ನು ಪೂರೈಸಲು ವಿಫಲವಾದ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಅರ್ಹ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಲು ನೀಡಲಾಗಿದ್ದ ಗಡುವನ್ನು ಹಿಂತೆಗೆದುಕೊಂಡಿದೆ.

ಗೃಹಜ್ಯೋತಿ ಯೋಜನೆ ಜಾರಿ ಹೊರೆ ಗ್ರಾಹಕರ ಮೇಲೆ ಹೇರುವುದಿಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
ಗೃಹಜ್ಯೋತಿ ಯೋಜನೆ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹೇರುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಶಕ್ತಿ ಯೋಜನೆ ಜೂನ್ 11ಕ್ಕೆ, ಗೃಹಜ್ಯೋತಿ ಆಗಸ್ಟ್ 1, ಗೃಹ ಲಕ್ಷ್ಮಿ ಆಗಸ್ಟ್ 17 ಅಥವಾ 18ರಂದು ಜಾರಿ: ಸಿಎಂ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಐದು ಖಾತರಿ ಯೋಜನೆಗಳಲ್ಲಿ ಮೂರನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಆಗಸ್ಟ್ 1 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಮತ್ತು ಆಗಸ್ಟ್ 17 ಅಥವಾ 18 ರಂದು ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ.

ಒಂದಕ್ಕಿಂತ ಹೆಚ್ಚು ಮೀಟರ್ ಇದ್ದಲ್ಲಿ ಒಂದಕ್ಕೆ ಮಾತ್ರ ಉಚಿತ ವಿದ್ಯುತ್, ಬಾಡಿಗೆ ಮನೆಯವರಿಗೆ ಶಾಕ್!
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ 'ಗೃಹ ಜ್ಯೋತಿ' ಯೋಜನೆಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಈ ಯೋಜನೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊಸ ನಿಬಂಧನೆ ಹಾಕಿದ್ದು, ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

