Gruha Lakshmi scheme

ಗೃಹಲಕ್ಷ್ಮಿ ಹಣ ಪಾವತಿ ವಿಳಂಬ: ಮತದಾರರ ಮೇಲೆ ಪ್ರಭಾವ ಬೀರಲು ಸರ್ಕಾರದಿಂದ ಉದ್ದೇಶಪೂರ್ವಕ ನಡೆ- ಬಿಜೆಪಿ ಕಿಡಿ
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಲ್ಲಿ ವಿಳಂಬವಾಗಿರುವುದಕ್ಕೆ ಬಿಜೆಪಿ ನಾಯಕರು ಆತಂಕಕ್ಕೊಳಗಾಗಿದ್ದಾರೆ. ಮತದಾನದ ದಿನ ಅಥವಾ ಸ್ವಲ್ಪ ಮುಂಚಿತವಾಗಿ ಸರ್ಕಾರ ಈ ಹಣವನ್ನು ಜಮೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾರದಾದ್ರೂ ಮನೇಲಿ ಮಗು ಹುಟ್ಟಿದ್ರೂ, ಕಾಂಗ್ರೆಸ್ ನವರು 2 ಸಾವಿರದಿಂದ ಹುಟ್ಟಿದ್ದು ಅಂತಾರೆ: ಪ್ರಹ್ಲಾದ್ ಜೋಶಿ ಲೇವಡಿ
ದ್ವಿತೀಯ ಪಿ.ಯು.ಸಿ ಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ, ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂಬ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಣ ವಾಕ್ ಸಮರಕ್ಕೆ ಕಾರಣವಾಗಿದೆ.

ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಯೋಜನೆ; ವಿಡಿಯೋ ಹಂಚಿಕೊಂಡು ರಾಹುಲ್ ಗಾಂಧಿ ಮೆಚ್ಚುಗೆ!
ಗೃಹಲಕ್ಷ್ಮಿ ಯೋಜನೆಯ ಹಣವು ವಿದ್ಯಾಭ್ಯಾಸಕ್ಕೆ ನೆರವಾಯಿತು ಎಂದಿದ್ದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವೇದಾಂತ್ ನಾವಿ ಅವರ ಹೇಳಿಕೆಯ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿ: ಮಹಿಳೆಗೆ ಡಿಕೆ ಶಿವಕುಮಾರ್ ಮೆಚ್ಚುಗೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಪ್ರತೀ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿ ಮಾಡಿದ್ದು, ಮಹಿಳೆಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ ಮಹಿಳೆಯರು ಆರೋಪಿಸುತ್ತಿದ್ದರು.

ಗೃಹಲಕ್ಷ್ಮಿ ಯೋಜನೆ ಹಣ ಬರದಿದ್ದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!
ಗೃಹ ಲಕ್ಷ್ಮೀ ಯೋಜನೆ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಯಾವುದೇ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ
ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಯಾವುದೇ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ; ಮನೆ ಯಜಮಾನಿಯ ಖಾತೆಗೆ ಬರಲಿದೆ 2 ಸಾವಿರ ರೂಪಾಯಿ!
ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಚಾಲನೆ ನೀಡಿದರು.

ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ: ಕಾರ್ಯಕ್ರಮಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ಎಲ್ಲಾ ಶಾಸಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಆಹ್ವಾನ ನೀಡಿದ್ದಾರೆ.

