ರಾಜಕೀಯಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಭರವಸೆ: ಫೆ.16 ರಿಂದ ಮನೆ ಮನೆಗೆ ತೆರಳಿ 'ಗ್ಯಾರಂಟಿ ಕಾರ್ಡ್' ನೀಡಲು ಕಾಂಗ್ರೆಸ್ ಮುಂದು!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನಾಯಕರು ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಇದೀಗ ಮನೆ ಮನೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.