guarantee

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್'ಗೆ ಸಿದ್ದು ತಿರುಗೇಟು
ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೊದಲೇ ಸಾಕಷ್ಟು ಚರ್ಚೆ ಮಾಡಲಾಗಿದೆ. ಗ್ಯಾರಂಟಿಗಳನ್ನು ನಿಲ್ಲಿಸುವುದು ಸೂಕ್ತವಲ್ಲ ಅಂತ ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ. ಹಾಗಾಗಿ, ಈ ನಿಟ್ಟಿನಲ್ಲಿ ಅಪಸ್ವರದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿಗಳ ಮೂಲಕ ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ HDK ಕಿಡಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ವಾಸ್ತವವೆಂದರೆ ಈ ಯೋಜನೆಗಳಿಗೆ ಕೋಟಿಗಟ್ಟಲೆ ಸಾಲ ಮಾಡಿ ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ತಕ್ಕ ಬೆಲೆ ತೆರಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲನ್ನು ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಸವಾಲು!
ಬಿಜೆಪಿ ಆಡಳಿತಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು...

ಗ್ಯಾರಂಟಿ ಯೋಜನೆ ನಿರ್ವಹಿಸಲು ಸಾಧ್ಯವಾಗದೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಗ್ಯಾರಂಟಿ ಯೋಜನೆಗಳ ನಿರ್ವಹಿಸಲು ಸಾಧ್ಯವಾಗದೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಹೇಳಿದ್ದಾರೆ.

ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ 'ಹೈ' ನೋಟಿಸ್
ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂಬ ಮನವಿಗೆ ಹೈಕೋರ್ಟ್ ಸ್ಪಂದಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ರದ್ದು: ಶಾಸಕ ಬಾಲಕೃಷ್ಣ
ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು

ಚುನಾವಣೆ, ಅಭಿವೃದ್ಧಿ ಕಾರ್ಯ, ಸಾಲ-ಬಾಕಿ ಬಿಲ್: ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಮುಂದೆ ಸಾಲು ಸಾಲು ಸವಾಲು!
ಲೋಕಸಭೆ ಚುನಾವಣೆಗೂ ಮುನ್ನ ಹೊಸ ಅಭಿವೃದ್ಧಿ ಕಾಮಗಾರಿಗಳ ಘೋಷಣೆ, ಪಂಚ ಗ್ಯಾರಂಟಿ ಯೋಜನೆಗಳು, ಸಾಲ ಹಾಗೂ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವ ಒತ್ತಡದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ತಿಂಗಳಾಂತ್ಯದಲ್ಲಿ ಬಜೆಟ್ ಮಂಡಿಸಬೇಕಿದೆ. ಈ ಬಾರಿಯ ಬಜೆಟ್ ಅವರಿಗೆ ಸವಾಲಿನದಾಗಿದ್ದು, ನಾಡಿದ್ದು ಶನಿವಾರ ತಮ್ಮ ಇಲಾಖಾವಾರು ಸಭೆಗಳನ್ನು ಪ್ರಾರಂಭಿಸಲಿದ್ದಾರೆ.

