guarantees

5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆ ಇದೇ ತಿಂಗಳಲ್ಲಿ ಜಾರಿ: ಸುರ್ಜೆವಾಲಾ
ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷ ನೀಡಿದ್ದ 5 ‘ಗ್ಯಾರಂಟಿ’ ಯೋಜನೆಗಳ ಪೈಕಿ 4 ಯೋಜನೆ ಅನುಷ್ಠಾನಗೊಂಡಿದ್ದು, 5ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಇದೇ ತಿಂಗಳಿ (ಡಿಸೆಂಬರ್)ನಲ್ಲಿ ನಮ್ಮ ಸರಕಾರ ಜಾರಿಗೊಳಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಹೇಳಿದ್ದಾರೆ.

ಗ್ಯಾರಂಟಿಗಳು ಮತ್ತು ರಾಜ್ಯಗಳ ಪ್ರಗತಿ: ಕರ್ನಾಟಕ, ತೆಲಂಗಾಣದಲ್ಲಿ ನಿಗಾವಣೆ
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹೊರೆಯಿಂದಾಗಿ ಎರಡೂ ರಾಜ್ಯಗಳ ಪ್ರಗತಿಯ ದರವನ್ನು ಸೂಕ್ಷ್ಮವಾಗಿ ಗಮನಿಸುವ ಸಾಧ್ಯತೆಯಿದೆ. ಗ್ಯಾರಂಟಿಗಳು ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆಯೇ ಎಂಬುದರ ಮೇಲೆ ನಿಗಾ ವಹಿಸಲಾಗುವುದು

ಬೆಳಗಾವಿ ಅಧಿವೇಶನ: ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿ ಕಲಾಪಕ್ಕೆ ಬಿಜೆಪಿ ಸಜ್ಜು, ಗ್ಯಾರಂಟಿ ವಿಚಾರ ಹಿಡಿದು ಹರಿಹಾಯುವ ಸಾಧ್ಯತೆ
ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನವು ಗ್ಯಾರಂಟಿ ವಿಚಾರ ಸೇರಿ ಹಲವು ವಿಷಯಗಳು ಮತ್ತು ವಿವಾದಗಳ ಬಗ್ಗೆ ಆಸಕ್ತಿದಾಯಕ ಚರ್ಚೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಗಳಿವೆ.

ಖಾತರಿ ಯೋಜನೆಗಳ ಅನುಷ್ಠಾನ ವಿಫಲ; ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಮೂರು ರಾಜ್ಯಗಳಲ್ಲಿ ಬಿಜೆಪಿಯ ಅಮೋಘ ಗೆಲುವು ಪಕ್ಷದ ರಾಜ್ಯ ಘಟಕಕ್ಕೆ ಬಹುದೊಡ್ಡ ಸ್ಥೈರ್ಯವನ್ನು ನೀಡಿದೆ. ಇದೀಗ, ಆಡಳಿತಾರೂಢ ಕಾಂಗ್ರೆಸ್ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಕೇಸರಿ ಪಕ್ಷವು ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದೆ.

ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ರದ್ದು: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತಿವೆ ಎಂದು ಭಾನುವಾರ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಥವಾ ಅದರ ಮಿತ್ರ ಪಕ್ಷ ಜೆಡಿಎಸ್‌ಗೆ ಜನರು ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಿದ್ದಾರೆ ಎಂದರು.

MSIL ಚಿಟ್ ಫಂಡ್ ನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರದ ಚಿಂತನೆ
ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.

ಲೋಕಸಭೆ ಚುನಾವಣೆ: 'ಗ್ಯಾರಂಟಿ' ಅಸ್ತ್ರ ಬಳಸಿ 20 ಸ್ಥಾನ ಗೆಲ್ಲುವ ಭರವಸೆಯಲ್ಲಿ ರಾಜ್ಯ ಕಾಂಗ್ರೆಸ್!
ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾಗಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಬಜೆಟ್ ನಲ್ಲಿ ಮಹಿಳಾ ಪರ ಯೋಜನೆಗಳಿಗೆ ಸಿಂಹಪಾಲು: ಮಕ್ಕಳ ಯೋಜನೆಗಳಿಗಿಲ್ಲ ಹೆಚ್ಚಿನ ಪಾಲು!
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಆಯವ್ಯಯದ ಬಹುಪಾಲು ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಇಲಾಖೆ ಕಸಿದುಕೊಂಡಿದೆ.

ಸಂಶೋಧನೆ ಇಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದೆ: ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ
ಪರಿಶೀಲನೆಗಳಿಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದ್ದು, ಇದೀಗ ಆರ್ಥಿಕ ಕೊರತೆಯಿಂದ ಅವುಗಳ ಜಾರಿಗೆ ತರಲು ಹೆಣಗಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಅವರು ಕಾಂಗ್ರೆಸ್ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು.

