guarantees

ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದೆ: ಬಿಜೆಪಿ
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆ ಹಾಗೂ ಅವುಗಳ ಅನುಷ್ಠಾನದಲ್ಲಿನ ವಿಳಂಬ ಕುರಿತು ಪ್ರತಿಪಕ್ಷ ಬಿಜೆಪಿ ಬುಧವಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಬುಧವಾರ ತರಾಟೆಗೆ ತೆಗೆದುಕೊಂಡಿತು.

'ನಕಲಿ ಗ್ಯಾರಂಟಿ' ನೀಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಪ್ರಧಾನಿ ಮೋದಿ
ಕರ್ನಾಟಕದಲ್ಲಿನ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

5 ಗ್ಯಾರಂಟಿ ಯೋಜನೆ ಶೀಘ್ರವಾಗಿ ಪೂರ್ಣಗೊಳಿಸಿ: ಸ್ವಪಕ್ಷ ನಾಯಕರಿಂದಲೇ ಸಿಎಂಗೆ ಹೆಚ್ಚಿದ ಒತ್ತಡ!
ಸರ್ಕಾರ ರಚನೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆಗಳ ನಡೆಸುತ್ತಿದ್ದು, ಈ ನಡುವಲ್ಲೇ 5 ಗ್ಯಾರಂಟಿ ಯೋಜನೆಗಳ ಶೀಘ್ರಗತಿಯಲ್ಲಿ ಜಾರಿಗೊಳಿಸುವಂತೆ ಸ್ವಪಕ್ಷ ನಾಯಕರೇ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

5 ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಲೋಕಸಭಾ ಚುನಾವಣೆಯಲ್ಲಿ ಸಹಾಯ ಮಾಡಲಿದೆ: ಸಲೀಂ ಅಹ್ಮದ್
ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಶನಿವಾರ ಹೇಳಿದರು.

ಖಾತರಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹೊಡೆತ ಬೀಳಲಿದೆ: ಸಚಿವ ಶರಣಬಸಪ್ಪ ದರ್ಶನಾಪುರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿ ಸರ್ಕಾರ ಜಾರಿಗೆ ತಂದಿರುವ ಖಾತರಿ ಯೋಜನೆಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಸ್ವಲ್ಪ ಮಟ್ಟಿಗೆ ತೊಂದರೆಯಾಗಲಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಶನಿವಾರ ಹೇಳಿದ್ದಾರೆ.

ಖಾತರಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವಾಗಲೇ ಸಿದ್ದರಾಮಯ್ಯ ಸರ್ಕಾರದ ಮುಂದಿದೆ ಮತ್ತೊಂದು ಸವಾಲು!
ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ, ಇದು ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ.

ಕಾಲಮಿತಿಯಲ್ಲಿ 'ಗ್ಯಾರಂಟಿಗಳ' ಅನುಷ್ಠಾನ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್
ಉಳಿದ ನಾಲ್ಕು ಭರವಸೆಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಸಚಿವ: ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಕಿಡಿ, ಮಾಧ್ಯಮದವರ ಮೇಲೆ ಸಿಟ್ಟು!
ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ವಿಚಾರವಾಗಿ ತಮ್ಮ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಗ್ಯಾರಂಟಿಗಳು’ ಉಚಿತವಲ್ಲ, ಬಡವರ ಸಬಲೀಕರಣಕ್ಕೆ ಕಾಂಗ್ರೆಸ್ ಪ್ರಯತ್ನ: ಗೃಹ ಸಚಿವ ಪರಮೇಶ್ವರ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಗ್ಯಾರಂಟಿಗಳು 'ಉಚಿತ' ಅಲ್ಲ. ಸಮಾಜದ ಎಲ್ಲಾ ಬಡವರು ಮತ್ತು ದೀನದಲಿತರ ಸಬಲೀಕರಣವೇ ಈ ಯೋಜನೆಗಳ ಉದ್ದೇಶವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಇಲ್ಲಿ ಹೇಳಿದರು.

