Gyanesh Kumar

'ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ CJP ಹಿಂದೆ ಸರಿಯಲ್ಲ; Gen Z ತನ್ನ ಭಾಷೆಯಲ್ಲೇ ಉತ್ತರಿಸಲಿದೆ': ಅಶುತೋಷ್ ರಂಕಾ
ಕಳೆದ 48 ಗಂಟೆಗಳ ಕಾಲ ನಿರ್ಧಾರ ಕೈಗೊಳ್ಳುವ ಹೊಣೆ ಕುಮಾರ್ ಅವರ ಕೈಯಲ್ಲಿತ್ತು; ಈಗ ಅದು ಸಿಜೆಪಿ ಕೈಯಲ್ಲಿದೆ. ನಾವು ಅಕ್ಟೋಬರ್ 2 ರಂದು ದೇಶಾದ್ಯಂತ ಪ್ರತಿಭಟನೆಯನ್ನು ಆರಂಭಿಸಲಿದ್ದೇವೆ ಎಂದರು.

'BJP ಟಿಕೆಟ್‌ನಲ್ಲಿ ಸ್ಪರ್ಧಿಸುವಂತೆ ಜ್ಞಾನೇಶ್ ಕುಮಾರ್ ಕೇಳಿದ್ದರು': ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಹೇಳಿಕೆ
2016ರಲ್ಲಿ ಜ್ಞಾನೇಶ್ ಕುಮಾರ್ ಸೇವೆಯಲ್ಲಿದ್ದಾಗ ಈ ಪ್ರಸ್ತಾವ ಮುಂದಿಟ್ಟಿದ್ದರು. 2016ರಲ್ಲಿ ತಾವು ಕೇರಳದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಮಾತುಕತೆ ನಡೆದಿತ್ತು ಎಂದು ಜಿಜಿ ಥಾಮ್ಸನ್ ತಿಳಿಸಿದ್ದಾರೆ.

'ಬಂಡಾಯ ಇಲ್ಲ, ಸರ್ವಾನುಮತದ ಅನುಮೋದನೆ': SIR ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ!
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಶನಿವಾರ ದೆಹಲಿಯ ನಿರ್ವಾಚನ್ ಸದನ್‌ನಲ್ಲಿ ನಡೆದ ಪೂರ್ಣ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದರು.

CEC ಜ್ಞಾನೇಶ್ ಕುಮಾರ್‌ಗೆ ಮತ್ತೊಂದು ಸಂಕಟ? ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟಿನ ಬೆನ್ನಲ್ಲೇ 20 ವರ್ಷಗಳ ಹಿಂದಿನ ಆತ್ಮಹತ್ಯೆ ಕೇಸ್ ಕೆದಕಿದ ಮಾಜಿ ಸಚಿವ
ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟಿನ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಈ ಹಿಂದೆ ಕೇರಳಂನಲ್ಲಿ ಐಎಎಸ್ ಅಧಿಕಾರಿಯಾಗಿದ್ದಾಗ, ನಡೆದಿದ್ದ ಹಳೆಯ ಆತ್ಮಹತ್ಯೆ ಪ್ರಕರಣವೊಂದರ ಆರೋಪಗಳು ಈಗ ಮತ್ತೆ ಮುಂಚೂಣಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ರಕ್ಷಿಸುವುದು ಹಾಗೂ ಮತ ಚಲಾಯಿಸುವ ನಾಗರಿಕರ ಸಾಂವಿಧಾನಿಕ ಹಕ್ಕನ್ನು ಕಾಪಾಡುವುದು ಈ ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ
'ಪಶ್ಚಿಮ ಬಂಗಾಳದಂತಹ ಗಡಿ ರಾಜ್ಯದಲ್ಲಿ, ಮತದಾರರ ಪಟ್ಟಿಯಿಂದ ಬಾಂಗ್ಲಾದೇಶಿ ಒಳನುಸುಳುಕೋರರ ಹೆಸರುಗಳನ್ನು ತೆಗೆದುಹಾಕಲು ಜ್ಞಾನೇಶ್ ಕುಮಾರ್ ಮುಂದಾಗಿದ್ದರು' ಎಂದು ಭಟ್ಟಾಚಾರ್ಯ ಹೇಳಿದರು.

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯಲ್ಲಿ, ಚುನಾವಣಾ ಆಯುಕ್ತರ ಬಹುಮತದ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಘೋಷಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.

ಚುನಾವಣಾ ಆಯೋಗ BJPಯ 'ಎಲೆಕ್ಷನ್ ಮೋರ್ಚಾ' ಆಗಿದೆಯೇ? ಜ್ಞಾನೇಶ್ ಕುಮಾರ್‌ರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ
"ಆಯೋಗ" ಎಂದರೆ ಒಬ್ಬ ವ್ಯಕ್ತಿಯಲ್ಲ, ಆ ಸಂಸ್ಥೆಯಲ್ಲಿರುವ ಸದಸ್ಯರೆಲ್ಲರೂ ಸೇರಿ ಆಯೋಗ ಎನಿಸಿಕೊಳ್ಳುತ್ತದೆ, ಸರ್ವಾನುಮತದ ನಿರ್ಧಾರಗಳು ಮಾತ್ರ ಆಯೋಗದ ನಿರ್ಧಾರ ಎನಿಸಿಕೊಳ್ಳುತ್ತದೆ.

ಚುನಾವಣಾ ಆಯೋಗದಲ್ಲೇ ಜನತಂತ್ರ ವಿರೋಧಿ ನೀತಿ: ಮುಂದೇನು? (ನೇರ ನೋಟ)
ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ, ಮುಖ್ಯ ಆಯುಕ್ತರ ಏಕಪಕ್ಷೀಯ ನಿರ್ಧಾರಗಳು ಜನತಂತ್ರದ ಸ್ವಾಯತ್ತತೆಗೆ ಹೊಸ ಪ್ರಶ್ನೆಗಳನ್ನು ಎಬ್ಬಿಸುತ್ತಿವೆ

