H D Kumaraswamy

ದೆಹಲಿಯಲ್ಲಿ ದೇವೇಗೌಡ; ಬುಧವಾರ ಕುಮಾರಸ್ವಾಮಿ ಪ್ರಯಾಣ, ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಿರ್ಣಾಯಕ ಹಂತಕ್ಕೆ?
2024ರ ಸಾರ್ವತ್ರಿಕ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಹೆಚ್ಚಿನ ಮಾತುಕತೆಗಾಗಿ ಕುಮಾರಸ್ವಾಮಿ ಅವರು ಬುಧವಾರ ದೆಹಲಿಗೆ ಹೋಗುವ ಸಾಧ್ಯತೆಯಿದೆ.

'ಜೆಡಿಎಸ್ ಜೊತೆ ಇನ್ನೂ ಮೈತ್ರಿ ಒಪ್ಪಂದ ಅಂತಿಮವಾಗಿಲ್ಲ': ಬಿಎಸ್ ಯಡಿಯೂರಪ್ಪ ಯೂಟರ್ನ್
ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಭಗವಂತ ನನಗೆ ಮೂರನೇ ಬಾರಿ ಪುನರ್ಜನ್ಮ ಕೊಟ್ಟಿದ್ದಾನೆ: ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹೆಚ್ ಡಿ ಕುಮಾರಸ್ವಾಮಿ
ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖ ಹೊಂದಿ ಬಿಡುಗಡೆ ಹೊಂದಿದ್ದಾರೆ.

ತೀವ್ರ ಜ್ವರ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬುಧವಾರ ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

'ಮಾನ-ಮರ್ಯಾದೆ ಇಲ್ಲದೆ ಕಾಂಗ್ರೆಸ್-ಬಿಜೆಪಿ ದೇಶವನ್ನು ಲೂಟಿ ಮಾಡುತ್ತಿವೆ, ವಿದೇಶಕ್ಕೆ ಹೋಗಲು ನಾನು ಸಚಿವರನ್ನು ಕೇಳಬೇಕಾ?': ಹೆಚ್ ಡಿ ಕುಮಾರಸ್ವಾಮಿ
'ವಿದೇಶದಲ್ಲೇ ಅವರು ಇದ್ದುಬಿಡಲಿ, ಬೇಕಾದರೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡುತ್ತೇವೆ' ಎಂದು ಕೆಲವು ಸಚಿವರುಗಳು ಬಿಟ್ಟಿ ಸಲಹೆ ಕೊಟ್ಟಿದ್ದಾರೆ, ಅವರು ಇಲ್ಲಿ ರಾಜ್ಯದ ಜನತೆಯ ಹಣವನ್ನು ಮಾನ ಮರ್ಯಾದೆ ಇಲ್ಲದೆ ಲೂಟಿ, ದರೋಡೆ ಮಾಡಿಕೊಂಡು ಕುಳಿತುಕೊಂಡಿದ್ದಾರೆ ಎಂದು ವಿದೇಶ ಪ್ರವಾಸ ಮುಗಿಸಿಕೊಂಡು ಬಂದ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೇವನಹಳ್ಳಿಯ

ಒಬ್ಬೊಬ್ಬ ಇನ್ಸ್ಪೆಕ್ಟರ್ಗೆ 5-6 ಕಡೆ ಅವಕಾಶ ಇದೆ, ಅದನ್ನ ನೋಡಿ ಸರಿ ಮಾಡಬೇಕು, ಸರಿ ಮಾಡುತ್ತೇವೆ: ಡಾ. ಪರಮೇಶ್ವರ್
ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪವನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ.

'ಅಣ್ಣ ಮಾತನಾಡೋದನ್ನ ತಮ್ಮ ಕೇಳ್ತಾ ಇರಬೇಕು, ಕುಮಾರಸ್ವಾಮಿ ಸಮಾಧಾನಕ್ಕೆ ಏನಾದರೂ ಮಾತನಾಡಲಿ': ಡಿ ಕೆ ಶಿವಕುಮಾರ್
'ಮಾಯಾನೋ, ಜ್ಯೋತಿಷ್ಯನೋ, ಧರ್ಮನೋ, ಶ್ರಮನೋ ಒಟ್ಟಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಳೆದ ಮೂರು ವರ್ಷಗಳ ಶ್ರಮ ಇದೆ, ನಮ್ಮ ಕಾರ್ಯಕರ್ತರನ್ನು ಮಲಗಲು ಬಿಟ್ಟಿಲ್ಲ, ಆ ಶ್ರಮದ ಪ್ರತಿಫಲ ಇವತ್ತು ಅನುಭವಿಸುತ್ತಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

'ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ... ಕಾಂಗ್ರೆಸ್ ಇರೋದು ವಸೂಲಿಗೆ': ದಳಪತಿ ಸಿಡಿಮಿಡಿ
ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು.

