H D Revanna

ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಜೈಲಿನಿಂದ ಬಿಡುಗಡೆ
ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅಪಹರಣ ಪ್ರಕರಣದಲ್ಲಿ ಜಾಮೀನು ಮಂಜೂರು: HD ರೇವಣ್ಣ ಇಂದು ಜೈಲಿನಿಂದ ಬಿಡುಗಡೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಲ್ಲೆ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಿದ ಆರೋಪ ಮೇಲೆ ಬಂಧನಕ್ಕೆ ಒಳಗಾಗಿದ್ದ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು ಇಂದು ಮಂಗಳವಾರ ಜೈಲಿನಿಂದ ಅವರು ಬಿಡುಗಡೆಯಾಗಲಿದ್ದಾರೆ.

ಜೈಲು ಪಾಲಾದ ಹೆಚ್ ಡಿ ರೇವಣ್ಣ ಅಮಾನತಿಗೆ ಪಕ್ಷದಲ್ಲಿ ಹೆಚ್ಚಿದ ಒತ್ತಡ, ಇಂದು ಜಾಮೀನು ಭವಿಷ್ಯ ನಿರ್ಧಾರ
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.

SIT ತನಿಖೆ ಹಿಂದೆ ನನ್ನ ಮತ್ತು ನನ್ನ ಕುಟುಂಬಕ್ಕೆ ಕಿರುಕುಳ ನೀಡುವ ದುರುದ್ದೇಶ: ಹೆಚ್ ಡಿ ರೇವಣ್ಣ
ತಾವು ಮೊದಲ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದಾಗ ಜಾಮೀನು ರಹಿತ ಅಪರಾಧ ಎಸಗಿಲ್ಲ ಎಂದು ಎಸ್‌ಐಟಿ ಹೇಳಿದ್ದರೂ, ನಂತರ ಅದನ್ನು ಹಿಂಪಡೆಯಲಾಗಿದೆ, ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ, ಏನಿದರ ಅರ್ಥ ಎಂದು ಪ್ರಶ್ನಿಸಿದ್ದಾರೆ.

SIT ಕಸ್ಟಡಿ ಇಂದು ಅಂತ್ಯ: ಮಾಜಿ ಸಚಿವ ರೇವಣ್ಣಗೆ ಜೈಲಾ, ಬೇಲಾ?
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜ್ಯನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಕಸ್ಟಡಿ ಬುಧವಾರ ಅಂತ್ಯವಾಗುತ್ತಿದ್ದು, ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ 4ಕ್ಕೆ ರೇವಣ್ಣ ವಿಚಾರಣೆ

ವಿದೇಶದಿಂದ ಪ್ರಜ್ವಲ್ ರೇವಣ್ಣನನ್ನು ವಾಪಸ್ ಕರೆಸಿಕೊಳ್ಳುತ್ತೇವೆ, ವಿಡಿಯೋ ಪರೀಕ್ಷೆಗೆ FSLಗೆ ರವಾನೆ: ಡಾ ಪರಮೇಶ್ವರ್
ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತರಿಗೆ ಭಯ ಹುಟ್ಟಿಸಿದರೆ ಅವರಿಗೆ ನಾವು ಸರ್ಕಾರ ವತಿಯಿಂದ ಭದ್ರತೆ ನೀಡುತ್ತೇವೆ ಎಂದು ಡಾ ಜಿ ಪರಮೇಶ್ವರ್ ಹೇಳಿದರು.

ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ಭವಾನಿ ನಿಂದನೆ: ರೇವಣ್ಣ, ಸೂರಜ್ ಕ್ಷಮೆಯಾಚನೆ!
ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತ್ನಿ ಭವಾನಿ ಪರ ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣ ಮತ್ತು ಅವರ ಮಗ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಕ್ಷಮೆ ಕೇಳಿದರು

ಒಂದೇ ಏಟಿಗೆ ಮೂರು ಹಕ್ಕಿಗಳು: ಪ್ರಜ್ವಲ್ ಜೊತೆ ಹೆಚ್ ಡಿ ರೇವಣ್ಣ, ಎ ಮಂಜುಗೂ ನೊಟೀಸ್; ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಏನೆಂದರು?
ಜೆಡಿಎಸ್ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.

