H K Patil

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ.

ಕಾನೂನು ಮಸೂದೆಗಳ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆ: ಕಾನೂನು ಸಚಿವ ಹೆಚ್ ಕೆ ಪಾಟೀಲ್
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿಯು ನಿನ್ನೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ 2023 ಮಸೂದೆಗಳ ಅಧ್ಯಯನ ವರದಿಯನ್ನು ಸಲ್ಲಿಸಿದೆ.

'ಸ್ಮಾರಕವನ್ನು ದತ್ತು ಪಡೆಯಿರಿ' ಯೋಜನೆ ಸೆಪ್ಟೆಂಬರ್ 25ಕ್ಕೆ ಆರಂಭ: ಸಚಿವ ಹೆಚ್ ಕೆ ಪಾಟೀಲ್
ಕರ್ನಾಟಕ ಸರ್ಕಾರವು ಇದೇ ಸೆಪ್ಟೆಂಬರ್ 25 ರಂದು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಸುಮಾರು 550 ಸ್ಮಾರಕಗಳನ್ನು ರಕ್ಷಿಸುವ, ಸಂರಕ್ಷಿಸುವ ಮತ್ತು ಮರುಸ್ಥಾಪಿಸುವ ಗುರಿಯೊಂದಿಗೆ ‘ಸ್ಮಾರಕವನ್ನು ಅಳವಡಿಸಿಕೊಳ್ಳಿ’ ಯೋಜನೆಯನ್ನು ಪ್ರಾರಂಭಿಸಲಿದೆ.

ಸಿಎಂ ಸಿದ್ದರಾಮಯ್ಯಗೆ ಮೂರು ಸಂಪುಟ ಉಪಸಮಿತಿಗಳಿಗೆ ಸದಸ್ಯರ ನೇಮಕ ಅಧಿಕಾರ
ನೀರಾವರಿ ಯೋಜನೆಗಳು, ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಮತ್ತು ರಾಜ್ಯದಲ್ಲಿ ಹೂಡಿಕೆಗೆ ಒತ್ತು ನೀಡುವ ಮೂರು ಕ್ಷೇತ್ರಗಳನ್ನು ನಿಭಾಯಿಸಲು ಮೂರು ಸಂಪುಟ ಉಪ ಸಮಿತಿಗಳನ್ನು ರಚಿಸುವ ಮತ್ತು ಅದಕ್ಕೆ ಸದಸ್ಯರನ್ನು ನೇಮಕ...

ಸೋಲಾರ್ ಯೋಜನೆ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್ ಭಾಗಿ: ಟಿ ಜೆ ಅಬ್ರಾಹಂ
ಗದಗದಲ್ಲಿ ಸೌರ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌ಕೆ ಪಾಟೀಲ್ ಮತ್ತು ಇತರರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಕರ್ನಾಟಕ ಲೋಕಾಯುಕ್ತ ಪೊಲೀಸರ ಮುಂದೆ ದೂರು ದಾಖಲಿಸಿದ್ದಾರೆ.

ಸುರ್ಜೇವಾಲ ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿ, ಎಚ್ ಕೆ ಪಾಟಿಲ್, ದಿನೇಶ್ ಗುಂಡೂರಾವ್ ಗೆ ಹೊಸ ಜವಾಬ್ದಾರಿ
ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ 'ರಣದೀಪ್ ಸಿಂಗ್ ಸುರ್ಜೇವಾಲ' ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ನಿರ್ವಹಣೆ: ಸರ್ಕಾರದ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ
ಕೋವಿಡ್-19 ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗ ಕೇಸ್ ವೊಂದನ್ನು ದಾಖಲಿಸಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಗದಗ ಶಾಸಕ ಎಚ್. ಕೆ. ಪಾಟೀಲ್ ಅವರ ದೂರಿನ ಆಧಾರದ ಮೇಲೆ ಈ ಕೇಸ್ ನ್ನು ದಾಖಲಿಸಲಾಗಿದೆ.

ಚುನಾವಣೆ ಮುಂದೂಡಿದರೆ ಕೋರ್ಟ್ ಗೆ ಮೊರೆ:ಹೆಚ್ ಕೆ ಪಾಟೀಲ್ ಎಚ್ಚರಿಕೆ
ಚುನಾವಣಾ ಆಯೋಗದ ನಡೆಗೆ ಕಾಂಗ್ರೆಸ್ ಅಸಮಾಧಾನಗೊಂಡಿದ್ದು ಕೋವಿಡ್ ನೆಪ ಹೇಳಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸರಿಯಲ್ಲ. ಜನಜೀವನ, ಚಟುವಟಿಕೆಗಳು ಹಿಂದಿನಂತೆಯೇ ಆರಂಭವಾಗಿದೆ. ಲಾಕ್ ಡೌನ್ ತೆರವುಗೊಳಿಸಲಾಗಿದೆ. ಹೀಗಾಗಿ ನೆಪವೊಡ್ಡಿ ಚುನಾವಣೆ ಮುಂದೂಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಲಾಕ್ ಡೌನ್ ಸಡಿಲಿಕೆ ಹಿಂಪಡೆಯುವಂತೆ ಮುಖ್ಯಮಂತ್ರಿಗೆ ಎಚ್.ಕೆ. ಪಾಟೀಲ್ ಪತ್ರ
ಲಾಕ್ ಡೌನ್ ಸಡಿಲಿಕೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಪತ್ರ ಬರೆದಿದ್ದಾರೆ.

