ರಾಜ್ಯH3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು.