Hanagal

ಹಾನಗಲ್-ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ: ಸಿಎಂ ಬಸವರಾಜ ಬೊಮ್ಮಾಯಿ
ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿನ್ನೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಿನಿ ಸಮರ: ಸಿಂದಗಿಯಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮುನ್ನಡೆ, ಹಾನಗಲ್ ನಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಹಣಾಹಣಿ
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಕ್ಷಣಕ್ಷಣಕ್ಕೂ ರೋಚಕವಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದಿದ್ದಾರೆ.

ಹಾನಗಲ್-ಸಿಂದಗಿ ಉಪ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ವೇಳೆಗೆ ಫಲಿತಾಂಶ ಪ್ರಕಟ
ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಮಧ್ಯಾಹ್ನ ಹೊತ್ತಿಗೆ ಹೊರಬೀಳಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಹಾನಗಲ್-ಸಿಂದಗಿ ಉಪ ಚುನಾವಣೆ: ನಾಳೆ ಫಲಿತಾಂಶ ಪ್ರಕಟ
ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನಾಳೆ(ನ.2)ಹೊರಬೀಳಲಿದೆ.

ಉಪಚುನಾವಣೆ: ಸಿಂದಗಿಯಲ್ಲಿ ಶೇ.69, ಹಾನಗಲ್ ಶೇ.83ರಷ್ಟು ಮತದಾನ
ಮಾಜಿ ಸಚಿವ, ಜೆಡಿಎಸ್ ಶಾಸಕ ಮನಗೂಳಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸಿಂದಗಿ ಮತ್ತು ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಶನಿವಾರ ಉತ್ಸಾಹದಿಂದ...

ಬಿಜೆಪಿಗಿಂತ ಬೊಮ್ಮಾಯಿಗೆ ಮುಖ್ಯವಾದ ಬೈ ಎಲೆಕ್ಷನ್ (ನೇರ ನೋಟ)
ಕೂಡ್ಲಿ ಗುರುರಾಜಕರ್ನಾಟಕದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆ ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆ. ಆಳುವ ಪಕ್ಷ ಬಿಜೆಪಿಗಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ತೂಕ ಹೆಚ್ಚು ಪ್ರತಿಷ್ಠೆ.

ಉಪ ಚುನಾವಣೆ: ಬೆಳಗ್ಗೆ 11 ಗಂಟೆ ವೇಳೆಗೆ ಹಾನಗಲ್ ಶೇ.24.31, ಸಿಂದಗಿ ಶೇ.32.47ರಷ್ಟು ಮತದಾನ
ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಈ ವರೆಗೂ ಹಾನಗಲ್ ನಲ್ಲಿ ಶೇ.24.31 ಹಾಗೂ ಸಿಂದಗಿಯಲ್ಲಿ ಶೇ.32.47ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸಿಂದಗಿ, ಹಾನಗಲ್ ಉಪಚುನಾವಣೆ ಮತದಾನ ಆರಂಭ: ಬೆಳಿಗ್ಗೆ 7- ಸಂಜೆ 5ರವರೆಗೆ ಮತದಾನ, ನ.2ಕ್ಕೆ ಫಲಿತಾಂಶ
ರಾಜ್ಯದ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು
ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

