ರಾಜಕೀಯಹಾಸನ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ರನ್ನು ಭೇಟಿ ಮಾಡಿ ಜೆಡಿಎಸ್ ಗೆ ಶಾಕ್ ಕೊಟ್ಟ ಪ್ರೀತಂ ಗೌಡ ಬೆಂಬಲಿಗರು!
ಹಾಸನ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ಆಪ್ತ ಉದ್ದೂರ್ ಪುರುಷೋತ್ತಮ್ ನೇತೃತ್ವದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.