Hassan ticket

ವಿಧಾನಸಭಾ ಚುನಾವಣೆ: ಹಾಸನ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಭವಾನಿ ರೇವಣ್ಣ, ಸ್ವರೂಪ್ ಮುಂದು!
ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಹೋದರ ಎಚ್‌ಡಿ ರೇವಣ್ಣ ಮುಂದುವರೆದಿದ್ದು, ಇದರ ನಡುವಲ್ಲೇ ಭವಾನಿ ರೇವಣ್ಣ ಹಾಗೂ ಎಚ್‌ಪಿ ಸ್ವರೂಪ್ ಇಬ್ಬರೂ ಒಂದೇ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಮಾತೇ ಅಂತಿಮ: ಹೆಚ್ ಡಿ ರೇವಣ್ಣ
ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ.

ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರ ಟಿಕೆಟ್ ಹಂಚಿಕೆ ಕಗ್ಗಂಟು: ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧೆ?
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಹಂಚಿಕೆ ಕುರಿತ ಬಿಕ್ಕಟ್ಟು ಶಮನ ಆಗುವ ಲಕ್ಷಣ ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಅವರಿಗೆ ಹಾಸನ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲು ಅಂತಿಮ ರಣಕಹಳೆ ಮೊಳಗಿಸಿದ್ದಾರೆ. ಟಿಕೆಟ್ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಬೇಕು, ಜೆಡಿಎಸ್ ಸರ್ಕಾರ ರಚಿಸಲು ಜನತೆ ಶಕ್ತಿ ತುಂಬಬೇಕು: ಭವಾನಿ ರೇವಣ್ಣ
ವಿಧಾನಸಭೆ ಚುನಾವಣೆ ದಿನ ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಪ್ರತಿದಿನ ಗರಿಗೆದರುತ್ತಿದೆ. ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ದಿನದಿನ ಹೆಚ್ಚಾಗುತ್ತಿದೆ. ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹಠ ಬಿಡುತ್ತಿಲ್ಲ. ಈ ಬಾರಿ ಟಿಕೆಟ್ ಗಿಟ್ಟಿಸಿ ಶಾಸಕಿಯಾಗಿ ವಿಧಾನಸೌಧ ಮೆಟ್ಟಿಲು ಹತ್ತಿಯೇ ಸಿದ್ಧ ಎಂದು ಪಟ್ಟು ಹಿಡಿಯುತ್ತ

ಭವಾನಿ ರೇವಣ್ಣ ಈ ಚುನಾವಣೆಯಲ್ಲಿ ಅನಿವಾರ್ಯವಲ್ಲ, ಟಿಕೆಟ್ ಗೊಂದಲವನ್ನು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ: ಹೆಚ್ ಡಿ ಕುಮಾರಸ್ವಾಮಿ
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಇಂದು ಜೆಡಿಎಸ್ ನ ಪಂಚರತ್ನ ಯಾತ್ರೆಯ ಮಧ್ಯೆ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಜೆಡಿಎಸ್ ನಲ್ಲಿ ದೇವೇಗೌಡ, ಕುಮಾರಸ್ವಾಮಿ, ರಾಜ್ಯಾಧ್ಯಕ್ಷರ ತೀರ್ಮಾನವೇ ಅಂತಿಮ: ಹಾಸನ ಟಿಕೆಟ್ ಫೈಟ್ ಗೆ ಹೆಚ್ ಡಿ ರೇವಣ್ಣ ಫುಲ್ ಸ್ಟಾಪ್
ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ನಾಯಕ ಹಾಗೂ ತಮ್ಮ ಸೋದರ ಕುಮಾರಸ್ವಾಮಿ ಮತ್ತು ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

