Hathras case

ನಿರ್ಭಯಾ ಕೇಸಿನಲ್ಲಿ ಸೋತು ಸುಣ್ಣವಾಗಿರುವ ವಕೀಲನಿಂದ ಹತ್ರಾಸ್ ಆರೋಪಿಗಳ ಪರ ವಕಾಲತ್ತು
ದೇಶಾದ್ಯಂತ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಪರ ಹೋರಾಟ ನಡೆಸಿ ಸೋತು ಸುಣ್ಣವಾಗಿರುವ ವಕೀಲ ಎ ಪಿ ಸಿಂಗ್, ಇದೀಗ ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಾಲ್ವರು ಆರೋಪಿಗಳ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸುತ್ತಿದ್ದಾರೆ.

ಕಾವಿ ಹಾಕಿಕೊಳ್ಳಲು ಯೋಗಿ ನಾಲಾಯಕ್: ಸಿದ್ದರಾಮಯ್ಯ ಟೀಕಾ ಪ್ರಹಾರ
ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ ಖಂಡಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯ
ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ.

ಹತ್ರಾಸ್ ಪ್ರಕರಣ ಸಿಬಿಐಗೆ ವಹಿಸಿದ ಸಿಎಂ ಯೋಗಿ; ಮೃತ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ಪ್ರಿಯಾಂಕಾ!
ಹತ್ರಾಸ್ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಿಬಿಐಗೆ ವರ್ಗಾಯಿಸಿದ್ದಾರೆ.

ಹತ್ರಾಸ್ ಪ್ರಕರಣ: ಎಸ್‌ಪಿ, ಡಿಎಸ್‌ಪಿ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆದೇಶ
ಹತ್ರಾಸ್ ಅತ್ಯಾಚಾರ ಪ್ರಕರಣದ ಸಂಬಂಧ ನಡೆದ ಮಹತ್ವದ ಬೆಳವಣಿಗೆಯಲ್ಲಿ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಮತ್ತಿತರೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಪೊಲೀಸರಿಂದ ಒತ್ತಡ; ಸಿಬಿಐ ತನಿಖೆಗೆ ಆಗ್ರಹಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತೆಯ ತಂದೆ
ಉತ್ತರ ಪ್ರದೇಶದ ಹತ್ರಾಸ್ ಗ್ಯಾಂಗ್ ರೇಪ್ ನ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಪೊಲೀಸರಿಂದ ಒತ್ತಡವಿದ್ದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ.

ಹತ್ರಾಸ್ ಪ್ರಕರಣ: ದಲಿತರ, ಹೆಣ್ಣುಮಕ್ಕಳ ಸುರಕ್ಷತೆ ಮೋದಿ ಆಡಳಿತದಲ್ಲಿ ದೊಡ್ಡ ಜೋಕ್ ಆಗಿದೆ - ಮಮತಾ
ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೋದಿ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ದೊಡ್ಡ ತಮಾಷೆಯಾಗಿ ಪರಿಣಮಿಸಿದೆ ಎಂದಿದ್ದಾರೆ.

