Haveri

ಹಾವೇರಿ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಮಿಷನ್ ಎಂದರ್ಥ: ಜೆ.ಪಿ. ನಡ್ಡಾ
ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಪರವಾಗಿದೆ, ಗೆಲುವು ಖಚಿತ: ಆನಂದಯ್ಯ ಗಡ್ಡದೇವರಮಠ (ಸಂದರ್ಶನ)

ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ; ಸಾರ್ಥಕವಾಯ್ತು ಎಂದ ಸಿದ್ದರಾಮಯ್ಯ
ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಆಸ್ತಿ ಮೌಲ್ಯ 54 ಕೋಟಿ ರೂ., ಯಾವುದೇ ವಾಹನ ಹೊಂದಿಲ್ಲ!: ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಅವರು ಘೋಷಿಸಿಕೊಂಡಂತೆ ಅವರ ಬಳಿ 23.45 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯಿದೆ.

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ಡಿಕ್ಕಿ, ಮೂವರು ಸಾವು
ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿದ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಲೋಕಸಭೆ ಚುನಾವಣೆ: ಹಾವೇರಿ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳ ಬದಲಾವಣೆ? ಶೆಟ್ಟರ್- ಪಾಟೀಲ್ ಮುಖಾಮುಖಿ?
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಹೆಸರು ಘೋಷಣೆಯಾಗಿದ್ದರೂ ಅಭ್ಯರ್ಥಿಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

2024 ಲೋಕಸಭೆ ಚುನಾವಣೆ: ಕಾಂಗ್ರೆಸ್‌ಗೆ ಸೋಲುವ ಭಯ, ಅಭ್ಯರ್ಥಿಗಳೇ ಸಿಗುತ್ತಿಲ್ಲ- ಬಸವರಾಜ ಬೊಮ್ಮಾಯಿ
ಸೋಲಿನ ಭೀತಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಮತ್ತು ಸರ್ಕಾರದ ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತ: ರೈತರ ಆಕ್ರೋಶ ಬೆನ್ನಲ್ಲೇ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ
ಬ್ಯಾಡಗಿ ಮೆಣಸಿನಕಾಯಿ ಬೆಲೆ ಹಠಾತ್ ಕುಸಿತಗೊಂಡಿದ್ದು, ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ನಾನು ಎಚ್ಚರಿಕೆ ಕೊಡ್ತಿಲ್ಲ, ಡಿಮ್ಯಾಂಡ್ ಮಾಡ್ತಿದ್ದೇನೆ; ತ್ಯಾಗ ಮಾಡಿ ಬಂದಿದ್ದೇನೆ, ಟಿಕೆಟ್ ನನಗೇ ಕೊಡ್ಬೇಕು: ಬಿ.ಸಿ ಪಾಟೀಲ್
ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ.

