Haveri

ಹಾವೇರಿ: ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ-ತಾಯಿ ಆತ್ಮಹತ್ಯೆ; ಮನನೊಂದು ವಿವಾಹಿತ ಮಗಳು ನೇಣಿಗೆ ಶರಣು
ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಸಿಎಂ ಬೊಮ್ಮಾಯಿ ನಿವಾಸದ ಎದುರು ಪಂಚಮಸಾಲಿಗರ ಪ್ರತಿಭಟನೆ
ಮೀಸಲಾತಿಯಲ್ಲಿ ಸ್ಪಷ್ಟತೆಯ ಕೊರತೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಪಂಚಮಸಾಲಿ ಸಮುದಾಯದವರು ಇಂದು ಪ್ರತಿಭಟನೆ ನಡೆಸಿದರು.

ಹಾವೇರಿಯ ಪ್ರಸಿದ್ದ ಏಲಕ್ಕಿ ಹಾರ: ಇಂದಿನವರೆಗೆ ಎಲ್ಲಾ ಪ್ರಧಾನಿಗಳ ಕೊರಳನ್ನು ಅಲಂಕರಿಸಿರುವ ಹೆಗ್ಗಳಿಕೆ!
ಹಾವೇರಿಯ ಸಾಂಪ್ರದಾಯಿಕ ಏಲಕ್ಕಿ ಹಾರಗಳು ಜನಪ್ರಿಯತೆ ಪಡೆದಿವೆ. ಇಲ್ಲಿನ ಕುಟುಂಬವೊಂದು ದಶಕಗಳಿಂದ ಈ ಹಾರಗಳನ್ನು ಘಮ ಘಮ ಸುವಾಸನೆಯೊಂದಿಗೆ ತಯಾರಿಸುತ್ತಿದೆ.

ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯ 'ಜನ ಸಾಹಿತ್ಯ ಸಮ್ಮೇಳನ' ಬೆಂಗಳೂರಿನಲ್ಲಿ ಆಯೋಜನೆ
ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಪರಂಪರೆ ಹಾಗೂ ಅಲ್ಪಸಂಖ್ಯಾತರ ಅವಗಣನೆ ನಡೆಸಿದೆ, ಹೀಗಾಗಿ ಪರ್ಯಾಯವಾಗಿ ಸಮಾನ ಮನಸ್ಕ ಸಾಹಿತಿಗಳು ಮತ್ತು ಕನ್ನಡ ಪರ ಹೋರಾಟಗಾರರಿಂದ ಜನವರಿ 8ರಂದು ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ‘ಜನ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗುವುದು ಎಂದು ಇತ್ತೀಚೆಗೆ ಕನ್ನಡ ಚಿಂತಕ

ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿ
ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

30 ವರ್ಷಗಳಿಂದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ ಶಂಕರ್... ಇವರ ಬೇಡಿಕೆ ಇದೊಂದೇ...
ಹಾವೇರಿಯಲ್ಲಿ ನಿನ್ನೆ ಶುಕ್ರವಾರ ಉದ್ಘಾಟನೆಗೊಂಡ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೈಸೂರು ನಿವಾಸಿ ಬಿ.ಎ.ಶಂಕರ್ ಎಲ್ಲರ ಗಮನ ಸೆಳೆದರು.

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಸಿಎಂ ಬೊಮ್ಮಾಯಿ
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ...

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಯಲ್ಲಿ ಚಾಲನೆ, ಅಕ್ಷರ ಜಾತ್ರೆ ಆರಂಭ: ಕಲಾ ತಂಡಗಳ ಮೆರುಗು
ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದೆ. ಹಾವೇರಿಯಲ್ಲಿ ಇಂದು ಬೆಳಗ್ಗೆ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.

ಪರ್ಯಾಯ ಸಮ್ಮೇಳನ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ: ಸಚಿವ ಸುನೀಲ್ ಕುಮಾರ್
ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಂಡಾಯ ಎದ್ದಿರುವ ಕೆಲ ಹಿರಿಯ ಸಾಹಿತಿಗಳು ಪರ್ಯಾಯ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ.

